ರಾಯಚೂರು: ‘ವಚನಗಳ ಹಸ್ತ ಪ್ರತಿಗಳನ್ನು ಸಂಗ್ರಹಿಸಿ ಲೋಕಕ್ಕೆ ಪರಿಚಯಿಸಿದ ಶ್ರೇಯಸ್ಸು ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಅವರ ಸೇವೆ ಹಾಗೂ ಪರಿಶ್ರಮವನ್ನೂ ಮರೆಯಲಾಗದು’ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ ಹೇಳಿದರು.

ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಡಾ.ಫ.ಗು.ಹಳಕಟ್ಟಿ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸರಳ, ಸಜ್ಜನಿಕೆ, ಕ್ರಿಯಾಶೀಲತೆ, ವಿಶೇಷ ಆಸಕ್ತಿ, ಪರಿಶ್ರಮ ಮತ್ತು ನಾಡು–ನುಡಿ ಹಾಗೂ ಸಾಹಿತ್ಯದ ಬಗ್ಗೆ ಹಳಕಟ್ಟಿ ಅವರಿಗೆ ವಿಶೇಷ ಕಾಳಜಿ, ಪ್ರೀತಿ ಇತ್ತು. ಶರಣ ಸಾಹಿತ್ಯದ ಬಗೆಗಿನ ಪ್ರೇಮ, ಶ್ರದ್ದೆ ಹಾಗೂ ಕಾಯಕ ಪ್ರವೃತ್ತಿಯು ವಚನ ಸಾಹಿತ್ಯದ ರಕ್ಷಣೆಗೆ ನೆರವಾಯಿತು’ ಎಂದರು.

‘ಹಸ್ತಪ್ರತಿಗಳ ಪ್ರಕಟಣೆಗೆಂದೇ 1926ರಲ್ಲಿ ‘ಶಿವಾನುಭವ’ ಪತ್ರಿಕೆಯನ್ನು ಪ್ರಾರಂಭಿಸಿದರು. ಈ ಮಾಸ ಪತ್ರಿಕೆ 35 ವರ್ಷಗಳ ಕಾಲ ನಿರಂತರವಾಗಿ ನಡೆಯಿತು. 1927ರಲ್ಲಿ ‘ನವಕರ್ನಾಟಕ’ ವಾರ ಪತ್ರಿಕೆ ಆರಂಭಿಸಿ ಸಾಹಿತ್ಯದ ಪ್ರಚಾರ ಮಾಡಿದರು’ ಎಂದು ತಿಳಿಸಿದರು

ರಾಯಚೂರಿನ ಉಪ ವಿಭಾಗಾಧಿಕಾರಿ ಮೆಹಬೂಬಿ ಮಾತನಾಡಿ, ‘ಫ.ಗು.ಹಳಕಟ್ಟಿ ಅವರು ಕರ್ನಾಟಕದ ಮ್ಯಾಕ್ಸ್ಮುಲ್ಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂಪಾದಿಸಿ ಪ್ರಕಟಿಸಿ ಸಂಶೋಧನಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ’ ಎಂದರು.

‘ಇಂದಿನ ಮಕ್ಕಳು ಕನ್ನಡ ಸಾಹಿತ್ಯ ಓದಲು ಹಿಂಜರಿಯುತ್ತಿದ್ದಾರೆ. ವಿದ್ಯಾರ್ಥಿಗಳು ಶರಣ ಸಾಹಿತ್ಯದಂತಹ ಮೌಲಿಕ ಸಾಹಿತ್ಯವನ್ನು ಓದಿ ಅದರ ಸಾರವನ್ನು ಅರಿತುಕೊಳ್ಳಬೇಕು’ ಎಂದು ತಿಳಿಸಿದರು.

ಹಿರಿಯ ಸಾಹಿತಿ ವೀರಹನುಮಾನ ಮಾತನಾಡಿ, ‘ಫ.ಗು.ಹಳಕಟ್ಟಿ ಅವರು ವಚನ ಸಾಹಿತ್ಯ ಮತ್ತು ಪತ್ರಿಕೋದ್ಯಮದ ಜತೆಗೆ ಸಂಘಟನೆ, ಬ್ಯಾಂಕಿಂಗ್, ಕೃಷಿ, ನೇಕಾರಿಕೆ, ಸಹಕಾರಿ ಹೀಗೆ ಎಲ್ಲದರಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. 1910 ದಿಲ್ಲಿ ಬಿಜಾಪುರ ಜಿಲ್ಲಾ ಲಿಂಗಾಯತ ವಿದ್ಯಾವರ್ಧಕ ಸಂಘ, 1912ರಲ್ಲಿ ಶ್ರೀಸಿದ್ದೇಶ್ವರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್, ಗ್ರಾಮೀಣ ಅಭಿವೃದ್ಧಿ ಸಂಘ, ಒಕ್ಕಲುತನ ಸಹಕಾರಿ ಸಂಘ, ನೇಕಾರರ ಸಂಘ, ಹತ್ತಿ ಮಾರಾಟಗಾರರ ಸಂಘ, ಸಹಕಾರ ಸಂಘಗಳನ್ನು ಸ್ಥಾಪಿಸಿ ಅವುಗಳ ಬೆಳವಣಿಗೆಗೆ ಶ್ರಮಿಸಿದ್ದಾರೆ’ ಎಂದರು.

‘ಶರಣರ ಜೀವನ ಮೌಲ್ಯಗಳನ್ನು ಕಾಲಾತೀತವಾದ ಕಾಲ ಗರ್ಭದಲ್ಲಿ ಹುದುಗಿ ಹೋಗಿದ್ದ ವಚನ ಸಾಹಿತ್ಯವೆಂಬ ಅನಘ್ರ್ಯ ರತ್ನವನ್ನು ಶೋಧಿಸಿ, ಅನ್ವೇಷಿಸಿ ಸಂಗ್ರಹಿಸಿ, ಸಂಪಾದಿಸಿ ಪ್ರಕಟಿಸಿ ಸಂಶೋಧನಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಶರಣ ಸಾಹಿತ್ಯವನ್ನು ನಿರ್ಲಕ್ಷಿಸಿದ್ದರೆ ಶರಣರ ವಚನಗಳು ದೊರಕುತ್ತಿರಲಿಲ್ಲ’ ಎಂದು ಹೇಳಿದರು.

‘ಒಬ್ಬ ಸಾಮಾನ್ಯ ವಕೀಲರಾಗಿದ್ದರೂ ಶರಣರ ತತ್ವಾದರ್ಶಗಳು ಅವರೊಳಗಿದ್ದ ವೈಚಾರಿಕ ಮಾನವ ಪ್ರಜ್ಞೆಯನ್ನು ಎತ್ತಿ ತೋರಿಸಿದ ಕೀರ್ತಿಗೆ ಭಾಜನರಾಗಿದ್ದಾರೆ‘ ಎಂದು ಬಣ್ಣಿಸಿದರು.

ಇದಕ್ಕೂ ಮೊದಲು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದವರಿಗೆ ಫ.ಗು.ಹಳಕಟ್ಟಿ ಅವರ ಭಾವಚಿತ್ರದ ಮೆರೆವಣಿಗೆ ನಡೆಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳ ನಾಯಕ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರೀವಿಕ್ಷಕ ಪರುಶುರಾಮ, ಹಿರಿಯ ಸಾಹಿತಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.