ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮಾಜಕ್ಕೆ ಮಾದರಿಯಾಗುವಂತೆ ಜೀವನ ನಡೆಸಿ’

Published 13 ಏಪ್ರಿಲ್ 2024, 15:46 IST
Last Updated 13 ಏಪ್ರಿಲ್ 2024, 15:46 IST
ಅಕ್ಷರ ಗಾತ್ರ

ಸಿರವಾರ: ‘ಸರಳವಾಗಿ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವ ನೂತನ ದಂಪತಿ ಸಮಾಜಕ್ಕೆ ಮಾದರಿಯಾಗುವಂತೆ ಜೀವನ ನಡೆಸಬೇಕು’ ಎಂದು ರಾಯಚೂರಿನ ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯರು ಸಲಹೆ ನೀಡಿದರು.

ತಾಲ್ಲೂಕಿನ ಅತ್ತನೂರು ಗ್ರಾಮದ ದಿಡ್ಡಿಬಸವೇಶ್ವರ ದೇವಸ್ಥಾನದಲ್ಲಿ ಲಿಂ.ರಾಯಚೋಟಿ ವೀರ ಶಿವಾಚಾರ್ಯರ 20ನೇ ಪುಣ್ಯಸ್ಮರಣೆ ಅಂಗವಾಗಿ ನಡೆದ ನವಲಗುಂದ ಅಜಾತ ನಾಗಲಿಂಗ ಶಿವಯೋಗಿಗಳ ಪುರಾಣ ಪ್ರಚನ ಮಹಾಮಂಗಲ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾಮೂಹಿಕ ವಿವಾಹದಲ್ಲಿ ಹಲವಾರು ಶ್ರೀಗಳು ನಿಮ್ಮ ಬಾಳಿಗೆ ಬೆಳಕು ನೀಡುತ್ತಾರೆ. ಆ ಬೆಳಕನ್ನು ತಾವು ದಿವ್ಯ ಜ್ಯೋತಿಯನ್ನಾಗಿ ಮಾಡಿಕೊಂಡು ಉತ್ತಮ ಜೀವನ ನಡೆಸಿದರೆ ಆಗ ಸಾಮೂಹಿಕ ವಿವಾಹಕ್ಕೆ ಸಾರ್ಥಕತೆ ಬರುತ್ತದೆ ಎಂದರು.

ರಾಯಚೂರಿನ ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯರು, ನೀಲಗಲ್ ಬೃಹನ್ಮಠದ ಪಂಚಾಕ್ಷರಿ ಶಿವಾಚಾರ್ಯರು, ಮಾನ್ವಿ ಕಲ್ಮಠದ ಪಂಡಿತ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯರು ಮಾತನಾಡಿದರು.

ಸಾಮೂಹಿಕ ವಿವಾಹದಲ್ಲಿ 10 ಜೋಡಿ ದಾಂಪತ್ಯಕ್ಕೆ ಕಾಲಿಟ್ಟರು.

ನವಲಕಲ್ಲು ಮಠದ ಅಭಿನವ ಸೋಮನಾಥ ಶಿವಾಚಾರ್ಯರು, ನೀಲಗಲ್ ಬೃಹನ್ಮಠದ ರೇಣುಕಾ ಶಾಂತಮಲ್ಲ ಶಿವಾಚಾರ್ಯರು, ಖಾನಾಪುರ ಮಠದ ಅಭಿನವ ವೀರಸಂಗಮೇಶ್ವರ ಶಿವಾಚಾರ್ಯರು, ಸುಲ್ತಾನಪುರ ಮಠದ ಶಂಭುಸೋಮನಾಥ ಶಿವಾಚಾರ್ಯರು, ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಮಿರ್ಜಾಪುರ, ಮಹಾಂತೇಶ ಪಾಟೀಲ, ಬಸವರಾಜ ಪಾಟೀಲ, ದೇವಸ್ಥಾನದ ಅಧ್ಯಕ್ಷ ವೀರಭದ್ರಯ್ಯಸ್ವಾಮಿ ಹಾಗೂ ನವೀನ ಪಾಟೀಲ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT