ಶನಿವಾರ, ಜುಲೈ 2, 2022
25 °C
‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ

ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ‘ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದಾಗಿ ಇಂದು ನಾವೆಲ್ಲರೂ ಸ್ವಾತಂತ್ರ ಜೀವನ ನಡೆಸಲು ಸಾಧ್ಯವಾಗಿದೆ’ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ತಿಳಿಸಿದರು.

75ನೇ ಭಾರತ ಸ್ವಾತಂತ್ರದ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಶ್ರೀರಾಮಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನದಲ್ಲಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

‘ಯಾರು ಇತಿಹಾಸ ಬಗ್ಗೆ ಅರಿತುಕೊಳ್ಳುತ್ತಾರೆ ಅಂತವರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ. ಭಾರತದ 75ನೇ ಸ್ವಾತಂತ್ರಅಮೃತ ಮಹೋತ್ಸವ ಅಂಗವಾಗಿ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ವೀರಯೋಧರ ಬಗ್ಗೆ ಈಗಿನ ಯುವಕರಿಗೆ ಹೆಚ್ಚಿನ ರೀತಿಯಲ್ಲಿ ತಿಳಿಸಬೇಕು’ ಎಂದರು.

ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಮಾತನಾಡಿ, ಭಾರತದಲ್ಲಿ ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ ತಂದುಕೊಡಲು ತ್ಯಾಗ ಬಲಿದಾನ ಹಾಗೂ ಬಂದು ಬಳಗ ಮತ್ತು ಕುಟುಂಬಗಳನ್ನು ದೇಶಕ್ಕೆ ಅರ್ಪಣೆ ಮಾಡಿದ ವೀರಯೋಧರ ಶ್ರಮ ಮರೆಯುವಂತಿಲ್ಲ. ಸ್ವಾತಂತ್ರ್ಯದ ನಂತರ ಕಷ್ಟ್ಟ ಸಮಯದಲ್ಲಿ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಪಣತೊಟ್ಟ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು  ಸೇರಿದಂತೆ ಅನೇಕರು ಪರಿಶ್ರಮದಿಂದ ಇಡೀ ಜಗತ್ತು ಭಾರತ ದೇಶವನ್ನು ತಿರುಗಿ ನೋಡುತ್ತಿದೆ ಎಂದು ಹೇಳಿದರು.

ಇದೇ ವೇಳೆ ಸ್ವಾತಂತ್ರ ಹೋರಾಟದ ತ್ಯಾಗ ಬಲಿದಾನಗಳ ಪ್ರಮುಖ ಸ್ಥಳವಾದ ಶ್ರೀರಾಮಶಾಲಾ ಬಯಲಿನಲ್ಲಿ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಶಿಲಾಫಲಕವನ್ನು ಅನಾವರಣ ಗೊಳಿಸಲಾಯಿತು.

ಕರ್ನಾಟಕದ ಕೆಚ್ಚೆದೆಯ ಸ್ವಾತಂತ್ರ ಹೋರಾಟಗಾರರ ತ್ಯಾಗ ಬಲಿದಾನಗಳ ಬಗ್ಗೆ ಪರಿಚಯ ಮಾಡಲಾಯಿತು. ಸ್ವಾತಂತ್ರ ಹೋರಾಟಗಾರದ ಡಿ. ಹಂಪಣ್ಣ ಹಾಗೂ ಸ್ವಾತಂತ್ರ ಹೋರಾಟದ ಪುಸ್ತಕ ಬರೆದ ರಾಮಣ್ಣ ಹವಳೆ ಅವರನ್ನು ಗೌರವಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರು, ಸ್ವಾತಂತ್ರ ಅಮೃತ ಮಹೋತ್ಸವದ ಸಂಕಲ್ಪ ಭೋದಿಸಿದರು.

ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯಿತಿ ಸಿಇಒ ನೂರಜಹಾರ್ ಖಾನಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ನಗರಸಭೆಯ ಅಧ್ಯಕ್ಷೆ ಲಲಿತಾ ಕಡಗೋಲ ಆಂಜನೇಯ, ನಗರಸಭೆಯ ಪೌರಾಯುಕ್ತ ಗುರುಲಿಂಗಪ್ಪ, ಉಪನ್ಯಾಸಕರು ಹಾಗೂ ಸಾಮಾಜಿಕ ಕಾರ್ಯಕರ್ತ ಕೇಶವ ಕೆ.ಎಸ್, ಸಾಹಿತಿ ವೀರ ಹನುಮಾನ, ತಹಸೀಲ್ದಾರ್ ಡಾ.ಹಂಪಣ್ಣ ಸಜ್ಜನ್ ಇದ್ದರು.

*

ದೇಶದ ಎಲ್ಲಾ ಸಮುದಾಯದ ಜನರ ರಕ್ತ, ಬಲಿದಾನದಿಂದ ಈ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಅವರಿಗೆ ಗೌರವ ಪೂರ್ವಕವಾಗಿ ಅಭಿನಂದನೆ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ
ದದ್ದಲ್ ಬಸನಗೌಡ, ರಾಯಚೂರು ಗ್ರಾಮೀಣ ಶಾಸಕ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.