ಹಟ್ಟಿ ಚಿನ್ನದ ಗಣಿ: ಹಟ್ಟಿ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ಎರಡು ಅಂಗಡಿಗಳಲ್ಲಿ ಕಳ್ಳತನ ನಡೆದಿದೆ.

ಹಟ್ಟಿ ಪಟ್ಟಣದ ಗುಂಡುರಾವ್ ಕಾಲೊನಿ ಬಳಿಯ ಎಸ್ಎಲ್ಎಸ್ ಬೇಕರಿ ಬಾಗಿಲು ಮುರಿದು ₹70 ಸಾವಿರ, ಗುಟ್ಕಾ, ಸಿಗರೇಟ್ ಪ್ಯಾಕೇಟ್ಗಳನ್ನು ಕದ್ದು ಪರಾರಿಯಾಗಿದ್ದಾರೆ ಮಾಲೀಕ ಶ್ರೀನಾಥ ತಿಳಿಸಿದ್ದಾರೆ.

ಹಳೆ ಬಸ್ ನಿಲ್ದಾಣದ ಬಳಿಯ ಅನು ಮೊಬೈಲ್ ಅಂಗಡಿಯಲ್ಲಿ ₹22 ಸಾವಿರ ಮೌಲ್ಯದ ಮೊಬೈಲ್ ಕಳ್ಳತನ ಮಾಡಲಾಗಿದೆ. ಈ ಕುರಿತು ಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷಯ ತಿಳಿದು ಸ್ಧಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ದುಷ್ಕರ್ಮಿಗಳನ್ನು ಪತ್ತೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದರು.

ಒಂದೇ ದಿನ ಎರಡು ಅಂಗಡಿಯಲ್ಲಿ ಕಳ್ಳತನ ನಡೆದಿರುವುದು ಜನರು ಭಯದ ವಾತಾವರಣ ನಿರ್ಮಾಣ ಮಾಡಿದೆ. ಆದಷ್ಟು ಬೇಗನೆ ಕಳ್ಳರನ್ನು ಪತ್ತೆ ಮಾಡಬೇಕು. ಇಂಥ ಘಟನೆಗಳು ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.