ಸಕಾಲದಲ್ಲಿ ಸಾಲ ಮರುಪಾವತಿ ಅಗತ್ಯ: ಎಂ.ಈರಣ್ಣ ಗುತ್ತೇದಾರ

ಮಾನ್ವಿ: ‘ಗ್ರಾಹಕರು ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದರೆ ಸಹಕಾರಿ ಸಂಸ್ಥೆಗಳು ಉತ್ತಮವಾಗಿ ಬೆಳವಣಿಗೆ ಹೊಂದಲು ಸಾಧ್ಯ’ ಎಂದು ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಎಂ.ಈರಣ್ಣ ಗುತ್ತೇದಾರ ಹೇಳಿದರು.
ಭಾನುವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ 11ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿಯು 2020-21ನೇ ಸಾಲಿನಲ್ಲಿ ₹ 56.7ಕೋಟಿ ವಹಿವಾಟು ನಡೆಸಿ ₹ 1.04ಕೋಟಿ ನಿವ್ವಳ ಲಾಭ ಗಳಿಸಿದೆ. ಸಂಸ್ಥೆಯ ಪ್ರಗತಿಗೆ ಸಿಬ್ಬಂದಿಯ ಪರಿಶ್ರಮ, ಗ್ರಾಹಕರ ಸಹಕಾರ ಹಾಗೂ ಆಡಳಿತ ಮಂಡಳಿಯ ಪ್ರೋತ್ಸಾಹ ಕಾರಣ’ ಎಂದರು.
‘ಸಿರವಾರ ಪಟ್ಟಣದಲ್ಲಿ ಈಗಾಗಲೇ ಶಾಖೆಯನ್ನು ತೆರೆಯಲಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ದೇವದುರ್ಗ ಹಾಗೂ ಲಿಂಗಸೂಗುರು ಪಟ್ಟಣಗಳಲ್ಲಿ ಸಂಸ್ಥೆಯ ಶಾಖೆಗಳನ್ನು ಆರಂಭಿಸಲಾಗುವುದು’ ಎಂದು ಅವರು ತಿಳಿಸಿದರು.
ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ ಬಿ ವಾರ್ಷಿಕ ವರದಿ ಮಂಡಿಸಿ, ವಿವಿಧ ನಿರ್ಣಯಗಳಿಗೆ ಸರ್ವ ಸದಸ್ಯರ ಅನುಮೋದನೆ ಪಡೆದರು. ಸಹಕಾರ ಭಾರತಿಯ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಗೌಡ ನಕ್ಕುಂದಿ ಸಭೆಯನ್ನು ಉದ್ಘಾಟಿಸಿದರು.
ಮಟಮಾರಿಯ ಜ್ಞಾನಾನಂದ ಮಹಾರಾಜ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆಯ ಮಾನ್ವಿ ಹಾಗೂ ಸಿರವಾರ
ಶಾಖೆಗಳ ನಿರ್ದೇಶಕ ಮಂಡಳಿ ಸದಸ್ಯರು ಇದ್ದರು. ಕೆ.ಅಜೇಯಕುಮಾರ ನಿರೂಪಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.