ಮಾನ್ವಿ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್ ಭೇಟಿ

ಮಾನ್ವಿ: ಪಟ್ಟಣದ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಕಚೇರಿಗಳಿಗೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್ ಮಂಗಳವಾರ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದರು.
ವಿದ್ಯಾರ್ಥಿ ವೇತನ ಪಾವತಿಯಲ್ಲಿನ ವಿಳಂಬ ಸರಿಪಡಿಸುವುದು ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದಲ್ಲಿನ ಲೋಪದೋಷಗಳು ಹಾಗೂ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಅವರು ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.
ನಂತರ ಬಿಸಿಎಂ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜೆಸ್ಕಾಂ ಕಚೇರಿ ಸೇರಿ ಇತರ
ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.
ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಾದ ಸತೀಶ, ಚಿದಾನಂದಪ್ಪ, ಸ್ಥಳೀಯ ಅಧಿಕಾರಿಗಳಾದ ರವೀಂದ್ರ, ಚಂದ್ರಶೇಖರ ನಂದಿಹಾಳ ಮತ್ತಿತರರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.