ಶನಿವಾರ, ಮೇ 21, 2022
20 °C

‘ಸಂಗೀತ ದೀಪೋತ್ಸವ’ ಸಂಭ್ರಮ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಧನೂರು: ಶ್ರೀಗುರು ಪಂಚಾಕ್ಷರಿ ಪುಟ್ಟರಾಜ ಗವಾಯಿಗಳ ಸಂಗೀತ ಸೇವಾ ಸಮಿತಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನ.5 ರಂದು ಬೆಳಿಗ್ಗೆ 9.30 ಗಂಟೆಗೆ ಸುಕಾಲಪೇಟೆ ರಸ್ತೆಯಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ 27ನೇ ವರ್ಷದ ಸಂಗೀತ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಬಸವರಾಜ ಮೋತಿ ತಿಳಿಸಿದ್ದಾರೆ.

ಬುಧವಾರ ಹೇಳಿಕೆ ನೀಡಿರುವ ಅವರು, ರಂಭಾಪುರಿ ಖಾಸಾಶಾಖಾ ಮಠದ ಸೋಮನಾಥ ಶಿವಾಚಾರ್ಯ, ಬೇವಿನಾಳದ ಶರಣಯ್ಯಸ್ವಾಮಿ ಹಿರೇಮಠ ಸಾನಿಧ್ಯ ವಹಿಸುವರು.

ಮನುಜಮತ ಬಳಗದ ಅಧ್ಯಕ್ಷ ಡಿ.ಎಚ್.ಕಂಬಳಿ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ಪತ್ರಕರ್ತ ಪ್ರಹ್ಲಾದಗುಡಿ ವಕೀಲ, ನಿವೃತ್ತ ಶಿಕ್ಷಕ ಧರಯ್ಯಸ್ವಾಮಿ, ಈರೇಶ ಇಲ್ಲೂರು ವಕೀಲ, ಜಾನಪದ ಅಕಾಡೆಮಿ ಸದಸ್ಯ ನಾರಾಯಣಪ್ಪ ಮಾಡಶಿರವಾರ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುವರು.

ಇದೇ ಸಂದರ್ಭದಲ್ಲಿ ಗಾಯಕರಾದ ಸ್ವಾತಿ ಶರ್ಮಾ, ಪುಟ್ಟರಾಜ, ಮಲ್ಲಮ್ಮ ಮೋತಿ, ಬಸವರಾಜ ಪತ್ತಾರ, ಅನುಷಾ ಕೋಟೆ, ಮಾರುತಿ ಅವರಿಂದ ಸಂಗೀತಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು