ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರು ನಡೆಸಿರುವ ಹೋರಾಟ ಬೆಂಬಲಿಸಿ ರ‍್ಯಾಲಿ

Last Updated 20 ಜನವರಿ 2021, 14:54 IST
ಅಕ್ಷರ ಗಾತ್ರ

ರಾಯಚೂರು: ದೆಹಲಿಯಲ್ಲಿ ರೈತರು ನಡೆಸಿರುವ ಹೋರಾಟ ಬೆಂಬಲಿಸಿ ಜನವರಿ 26ರಂದು ಬೆಂಗಳೂರಿನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಟ್ರ್ಯಾಕ್ಟರ್, ಎತ್ತಿನ ಬಂಡಿ, ಟ್ರಾಕ್ಸ್, ಟೆಂಪೊ, ಜೀಪು, ಕಾರು, ಮೋಟರ್ ಬೈಕ್‍ಗಳ ಮೂಲಕ ರ‍್ಯಾಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಖಾಸಗಿ ಕಂಪೆನಿಗಳ ಪರವಾಗಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿವೆ. ರೈತರು, ಕಾರ್ಮಿಕರನ್ನು ಹಾಗೂ ಜನಸಾಮಾನ್ಯರನ್ನು ವಂಚಿಸುತ್ತಿವೆ. ಹೊಸದಾಗಿ ಜಾರಿಗೊಳಿಸಿದ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡಲೇ ಬೇಕು ಎಂದರು.

ಎಪಿಎಂಸಿ ಉಳಿಸಬೇಕು. ಅನೇಕ ದಶಕಗಳಿಂದ ಅರ್ಜೀ ಹಾಕಿ ಕಾಯುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಹಾಗೂ ತಲೆ ಮೇಲೊಂದು ಸೂರು ಕಟ್ಟಿಕೊಂಡಿರುವ ಬಡಜನರಿಗೆ ಕೂಡಲೇ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಎಲ್ಲ ವಸತಿ ರಹಿತರಿಗೆ ನಿವೇಶನದ ಹಕ್ಕು ಕೊಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಗಳ ಮೇಲೆ ಒತ್ತಡ ಹಾಕಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT