ರಾಯಚೂರು: ತಾಲ್ಲೂಕಿನ ಎಲೆಬಿಚ್ಚಾಲಿ ಗ್ರಾಮದಲ್ಲಿ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಟ್ರ್ಯಾಕ್ಟರ್‌ನಲ್ಲಿ ಕಬ್ಬಿಣದ ವಸ್ತು ಹಾಗೂ ಟಿನ್ ಶೀಟ್ ಹಾಕಿಕೊಂಡು ಹೋಗುತ್ತಿದ್ದಾಗ ಬೈಕ್‌ಗೆ ಹಿಂಬದಿಯಿಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಬಿ.ಹನುಮಾಪುರ ಗ್ರಾಮದ ಚಂದ್ರಶೇಖರ (21) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಘಟನೆ ಬಳಿಕ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ