ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ರೈತ ವಿರೋಧಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಟ್ರ್ಯಾಕ್ಟರ್ ರ್‍ಯಾಲಿ

Published 27 ಜನವರಿ 2024, 15:28 IST
Last Updated 27 ಜನವರಿ 2024, 15:28 IST
ಅಕ್ಷರ ಗಾತ್ರ

ರಾಯಚೂರು: ರೈತ ವಿರೋಧಿ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಜನತಾ ಗಣರಾಜ್ಯೋತ್ಸವ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲಾಯಿತು.

ನಗರದ ಎಪಿಎಂಸಿ ಆವರಣದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ರ್‍ಯಾಲಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಸಂಬಂಧಿ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು. ಬರಪೀಡಿತ ಪ್ರದೇಶಗಳಿಗೆ ಪರಿಹಾರ, ಉಚಿತ ವಿದ್ಯುತ್, ಬೆಂಬಲ ಬೆಲೆ ಘೋಷಣೆ ಸೇರಿ ಕೃಷಿ ಸಂಬಂಧಿ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ, ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಲಾಗಿದೆ. ರೈತರ ಸಾಲಮನ್ನಾ, ರೈತರ ವಿರುದ್ಧದ ಸುಳ್ಳು ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದರೂ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದರು.

ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಚುನಾವಣೆ ವೇಳೆ ನೀಡಿದ್ದ ಸಾಲಮನ್ನಾ ಭರವಸೆ ಹಾಗೂ ಇತರೆ ರೈತರ ಪರ ಕಲ್ಯಾಣ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ರ್‍ಯಾಲಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ, ಜನಸಂಗ್ರಾಮ ಪರಿಷತ್ತಿನ ಸಂಚಾಲಕ ರಾಘವೇಂದ್ರ ಕುಷ್ಟಗಿ, ಹೋರಾಟಗಾರರಾದ ಕೆ.ಜಿ.ವೀರೇಶ, ಡಿ.ಎಚ್.ಪೂಜಾರ್, ಕರಿಯಪ್ಪ ಅಚ್ಚೊಳ್ಳಿ, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎಸ್.ಮಾರೆಪ್ಪ, ಮಲ್ಲನಗೌಡ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT