ಕಳ್ಳತನ ತಡೆಗೆ ವ್ಯಾಪಾರಿಗಳಿಂದ ಮನವಿ

7

ಕಳ್ಳತನ ತಡೆಗೆ ವ್ಯಾಪಾರಿಗಳಿಂದ ಮನವಿ

Published:
Updated:
Deccan Herald

ರಾಯಚೂರು: ಕೈಗಾರಿಕಾ ಪ್ರದೇಶದಲ್ಲಿ ಮೇಲಿಂದ ಮೇಲೆ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಉದ್ದಿಮೆದಾರರು ಆತಂಕಕ್ಕೆ ಒಳಗಾಗಿದ್ದಾರೆ. ಕಳ್ಳತನ ಪ್ರಕರಣಗಳನ್ನು ತಡೆಗಟ್ಟಲು ಕ್ರಮ ಜರುಗಿಸಿ ಉದ್ದಿಮೆದಾರರಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ದಿ ಗಂಜ್ ಮರ್ಚೆಂಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ವ್ಯಾಪಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಕಳ್ಳತನ ಪ್ರಕರಣಗಳನ್ನು ತಡೆಗಟ್ಟಲು ಹಲವು ಬಾರಿ ಮನವಿ ಸಲ್ಲಿಸಿದರೂ ಕಳ್ಳತನ ಪ್ರಕರಣಗಳು ಇನ್ನೂ ನಿಂತಿಲ್ಲ. ಆದ್ದರಿಂದ ಎರಡು ತಿಂಗಳಿನಿಂದ ಮೇಲಿಂದ ಮೇಲೆ ಕಳ್ಳತನ ಪ್ರಕರಣ ನಡೆಯುತ್ತಿರುವುದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕೈಗಾರಿಕಾ ಪ್ರದೇಶದಲ್ಲಿ ಪೊಲೀಸ್ ಠಾಣೆಯನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.

ಸಂಘದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ರೈಸ್ ಮಿಲ್ಲರ್ಸ್ ಅಧ್ಯಕ್ಷ ಎ.ಪಾಪಾರೆಡ್ಡಿ, ತಾರಾನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಾರಸಮಲ್ ಸುಖಾಣಿ, ತ್ರಿವಿಕ್ರಮ ಜೋಷಿ, ವಿ.ಲಕ್ಷ್ಮೀರೆಡ್ಡಿ, ರವಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !