ಶನಿವಾರ, ಮೇ 8, 2021
19 °C
ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಎರಡನೇ ಹಂತದ ತರಬೇತಿ

ತರಬೇತಿಗೆ ಗೈರುಹಾಜರಿಯಾದವರ ವಿರುದ್ಧ ಮೊಕದ್ದಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಸ್ಕಿ (ರಾಯಚೂರು): ಜಿಲ್ಲೆಯ ಮಸ್ಕಿ ವಿಧಾನಸಭೆಯ ಉಪ ಚುನಾವಣೆಯ ಮತದಾನ ಏಪ್ರಿಲ್‌ 17ರಂದು ನಡೆಯುಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಮಸ್ಕಿ ಪಟ್ಟಣದ ಹೊರವಲಯದಲ್ಲಿರುವ ದೇವನಾಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಎರಡನೇ ಹಂತದ ತರಬೇತಿಯನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು.

ಒಟ್ಟು 1,568 ಮಂದಿಯಲ್ಲಿ ಮತಗಟ್ಟೆಯ ಅಧ್ಯಕ್ಷಾಧಿಕಾರಿ, ಸಹಾಯಕ ಅಧ್ಯಕ್ಷಧಿಕಾರಿ ಸೇರಿದಂತೆ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವಿವಿಪ್ಯಾಟ್ ಹಾಗೂ ಇವಿಎಂಗಳು ಹಾಗೂ ಮತದಾನದ ಪ್ರಾರಂಭ ಹಾಗೂ ಮುಕ್ತಾಯದ ವೇಳೆಕೈಗೊಳ್ಳಬೇಕಾದ ಪ್ರಕ್ರಿಯೆಗಳ ಕುರಿತು ಬೆಳಿಗ್ಗೆ ಹಾಗೂ ಮಧ್ಯಾಹ್ನದ ಸೆಷನ್‍ಗಳಲ್ಲಿ ತರಬೇತಿ ನೀಡಲಾಯಿತು.

ಒಟ್ಟು 40 ಮಂದಿ ತರಬೇತುದಾರರು ತರಬೇತಿ ನೀಡಿದರು. ದೇವದುರ್ಗ, ಮಾನ್ವಿ ಹಾಗೂ ರಾಯಚೂರಿನಿಂದ 12 ಕೆ.ಎಸ್.ಆರ್.ಟಿ.ಸಿ ಹಾಗೂ 18 ಶಾಲಾ ವಾಹನಗಳಲ್ಲಿ ಸಿಬ್ಬಂದಿ ಕರೆತರಲಾಗಿತ್ತು.

ಗೈರುಹಾಜರಿ: ಚುನಾವಣಾ ಮತದಾನಕ್ಕೆ ಸಂಬಂಧಿಸಿದಂತೆ ನೀಡಲಾದ ಎರಡನೇ ಹಂತದ ತರಬೇತಿಗೆ ಒಟ್ಟು 74 ಸಿಬ್ಬಂದಿ ಗೈರು ಹಾಜರಾಗಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಈಗಾಗಲೇ ಅವರಿಗೆ ನೋಟೀಸ್ ಜಾರಿ ಮಾಡಲಾಗಿದೆ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ್ ನಿರ್ದೇಶನ ನೀಡಿದರು.

ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ಚುನಾವಣಾ ವೀಕ್ಷಕ ಶ್ರೀಧರ ಬಾಬು ಅಡ್ಡಂಕಿ ಅವರು ತರಬೇತಿ ವೇಳೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾಧಿಕಾರಿ ರಾಜಶೇಖರ ಡಂಬಳ, ತಹಶೀಲ್ದಾರರು, ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.