ಮಾನಸಿಕ ರೋಗಕ್ಕೆ ಸೂಕ್ತ ಚಿಕಿತ್ಸೆ ಅಗತ್ಯ: ಡಾ.ನಂದಿತಾ ಎಂ.ಎನ್.

ಭಾನುವಾರ, ಜೂನ್ 16, 2019
29 °C

ಮಾನಸಿಕ ರೋಗಕ್ಕೆ ಸೂಕ್ತ ಚಿಕಿತ್ಸೆ ಅಗತ್ಯ: ಡಾ.ನಂದಿತಾ ಎಂ.ಎನ್.

Published:
Updated:
Prajavani

ರಾಯಚೂರು: ಸಮಾಜದಲ್ಲಿ ಮಾನಸಿಕ ರೋಗದ ಬಗ್ಗೆ ಇರುವ ಮೂಡನಂಬಿಕೆಗಳು ಮತ್ತು ಕಳಂಕವನ್ನು ನಿರ್ಮೂಲನೆ ಮಾಡಿ ಸೂಕ್ತ ಚಿಕಿತ್ಸೆ ನೀಡುವ ಅಗತ್ಯವಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನುಧಿಕಾರಿ ಡಾ.ನಂದಿತಾ ಎಂ.ಎನ್. ಹೇಳಿದರು.

ವಿಶ್ವ ಸ್ಕಿಜೋಪ್ರೀನಿಯಾ ದಿನ ಅಂಗವಾಗಿ ವೀರಶೈವ ಶಿಕ್ಷಣ ಮಹಾವಿದ್ಯಾಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ಸ್ಕಿಜೋಪ್ರೀನಿಯಾ ಛಿದ್ರಮನಸ್ಕತೆ ಅರಿವು’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಛಿದ್ರಮನಸ್ಕತೆ ಕುರಿತು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದರು.

ಮನೋವೈದ್ಯ ಡಾ. ಮನೋಹರ್ ವೈ. ಪತ್ತಾರ್ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಶೇ 1 ರಷ್ಟು ಜನರು ಸ್ಕಿಜೋಪ್ರೀನಿಯಾ ರೋಗಕ್ಕೆ ಒಳಗಾಗುತ್ತಾರೆ. ಸಾಮಾನ್ಯವಾಗಿ 15-35ರ ವಯೋಮಾನದವರು ಸ್ಕಿಜೋಪ್ರೀನಿಯಾ ರೋಗಕ್ಕೆ ಒಳಗಾಗುತ್ತಾರೆ. ವರ್ತನೆಯಲ್ಲಿ ಬದಲಾವಣೆ, ರಾಜಭ್ರಮೆಗಳು, ವಿಭ್ರಮೆಗಳು ಮತ್ತು ಇತರೆ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಉಚಿತ ಸಲಹೆ ಹಾಗೂ ಚಿಕಿತ್ಸೆ ಪಡೆಯಬಹುದು ಅಥವಾ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಮನೋವೈದ್ಯ ವಿಭಾಗ ರಿಮ್ಸ್ ಆಸ್ಪತ್ರೆಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ವೀರಶೈವ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಮಂಜುಳಾ ಮಾತನಾಡಿ, ಇಂತಹ ಕಾರ್ಯಕ್ರಮಗಳು ಇಂದಿನ ದಿನಮಾನಗಳಲ್ಲಿ ಅತ್ಯಂತ ಉಪಯುಕ್ತವಾಗಿದ್ದು, ಇದರಿಂದ ಸಾರ್ವಜನಿಕರಲ್ಲಿ ಛಿದ್ರಮನಸ್ಕತೆಯ ಕುರಿತು ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ವಿಭಾಗದ ವತಿಯಿಂದ ಪ್ರಶಿಕ್ಷಣಾರ್ಥಿಗಳಿಗೆ ಆಶು-ಭಾಷಣ ಏರ್ಪಡಿಸಲಾಗಿತ್ತು. ಪ್ರಥಮ ಸ್ಥಾನವನ್ನು ರುಬೀನಾ ಸಮ್ರಿನ್, ದ್ವಿತಿಯ ಸ್ಥಾನವನ್ನು ಸುಪ್ರಿಯಾ ಜಿ.ವಿ ಹಾಗೂ ತೃತೀಯ ಸ್ಥಾನವನ್ನು ಮಂಜುನಾಥ ಅವರು ಪಡೆದರು. 

ಮಾನಸಿಕ ವಿಭಾಗದ ಆಪ್ತ ಸಮಾಲೋಚಕರಾದ ಸುವರ್ಣ, ಅನ್ನಪೂರ್ಣ, ಮೃತ್ಯುಂಜಯ, ಹರೀಶ್ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !