ಸಿಂಧನೂರು: ‘ತುಂಗಭದ್ರಾ ಜಲಾಶಯ ಅಪಾಯದ ಅಂಚಿನಲ್ಲಿದೆ. ನದಿಯಲ್ಲಿನ ಹೂಳು ತುಂಬಿರುವುದು ಅಷ್ಟೇ ಅಲ್ಲದೇ ನೀರಲ್ಲಿ ತ್ಯಾಜ್ಯ ಸೇರುತ್ತಿರುವುದು ಸೇರಿ ಹಲವು ಕಾರಣಗಳಿಂದ ಸಂಕಷ್ಟಕ್ಕೆ ಸಿಲುಕಿ ಬಳಲುತ್ತಿದೆ. ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ’ ಎಂದು ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ಅಧ್ಯಕ್ಷ ಬಸವರಾಜ ಪಾಟೀಲ ವೀರಾಪೂರ ಅಭಿಪ್ರಾಯಪಟ್ಟರು.

ಸ್ಥಳೀಯ ಟೌನ್ಹಾಲ್ನಲ್ಲಿ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ, ಪರ್ಯಾವರಣ ಟ್ರಸ್ಟ್ ಶಿವಮೊಗ್ಗ, ನಿರ್ಮಲ ತುಂಗಭದ್ರಾ ಅಭಿಯಾನ ಸಮಿತಿ ಸಂಯುಕ್ತಾಶ್ರಯದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನದ ಅಂಗವಾಗಿ ಕಿಷ್ಕಿಂದೆಯಿಂದ ಮಂತ್ರಾಲಯದವರೆಗೆ ಹಮ್ಮಿಕೊಂಡಿರುವ 3ನೇ ಹಂತದ ಜಲ-ಜನಜಾಗೃತಿ ಪಾದಯಾತ್ರೆ ಪ್ರಯುಕ್ತ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಪ್ರಸ್ತುತ ಪ್ರಕೃತಿ ಕೇಂದ್ರಿತ ವಿಕಾಸ ಮರೆಯಾಗಿ, ವ್ಯಕ್ತಿ ಕೇಂದ್ರಿತ ವಿಕಾಸ ಹೆಚ್ಚಿದೆ. ಇದರಿಂದ ನದಿಗಳು, ನದಿಮೂಲಗಳು ಕಲುಷಿತಗೊಳ್ಳುತ್ತಿವೆ. ಈ ಭಾಗದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಪ್ರತಿಯೊಬ್ಬರು ನದಿಯ ಸಂರಕ್ಷಣೆಗೆ ದೊಡ್ಡ ಮಟ್ಟದ ಜನಾಂದೋಲನ ನಡೆಸಬೇಕು’ ಎಂದರು.

ಸಾನ್ನಿಧ್ಯ ವಹಿಸಿದ್ದ ಮೂರುಮೈಲ್ ಕ್ಯಾಂಪಿನ ರಂಭಾಪುರಿ ಖಾಸಾಶಾಖಾ ಮಠದ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿ ಮಾತನಾಡಿ,‘ಕಲುಷಿತ ನೀರು, ರೋಗಗಳ ಉಲ್ಬಣ ಕುರಿತು ಗವಿಸಿದ್ದೇಶ್ವರ ಸ್ವಾಮೀಜಿ ಹೋರಾಟ ನಡೆಸಿ ಗಮನ ಸೆಳೆದರೂ ಸರ್ಕಾರ ಕಾರ್ಖಾನೆ ಸ್ಥಾಪನೆಗೆ ಅನುಮತಿ ನೀಡಿರುವುದು ದುರಂತದ ಸಂಗತಿ’ ಎಂದು ದೂರಿದರು.

ಶಾಸಕ ಹಂಪನಗೌಡ ಬಾದರ್ಲಿ,‘ಡಿ.28ರಂದು ಅಂಬಾಮಠ, 29ರಂದು ಗೊರೇಬಾಳ ಗ್ರಾಮದಲ್ಲಿ ಸಂಚರಿಸಿ 30ರಂದು ಸಿಂಧನೂರಿಗೆ ಪಾದಯಾತ್ರೆ ಮೂಲಕ ಬಂದು ಬೆಳಿಗ್ಗೆ 11ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ. ಪಾದಯಾತ್ರೆ ಭಾಗವಹಿಸುವ 600 ಜನರಿಗೆ ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಊಟ, ರಾತ್ರಿ ವಸತಿ ವ್ಯವಸ್ಥೆ ಕಲ್ಪಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗುವುದು’ ಎಂದರು.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಯದ್ದಲದೊಡ್ಡಿಯ ಮಹಾಲಿಂಗ ಸ್ವಾಮೀಜಿ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಮಾತನಾಡಿದರು.

ಕಾಂಗ್ರೆಸ್ ಮುಖಂಡ ಆರ್.ತಿಮ್ಮಯ್ಯ ನಾಯಕ, ಉದ್ಯಮಿ ಬಿ.ಶ್ರೀಹರ್ಷ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಮೀನಪಾಷಾ ದಿದ್ದಿಗಿ, ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಹಂಚಿನಾಳ, ಜಮಾಅತೆ ಇಸ್ಲಾಮಿ ಹಿಂದ್ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಹುಸೇನ್ಸಾಬ, ಬಿಜೆಪಿ ಮುಖಂಡರಾದ ಈರೇಶ ಇಲ್ಲೂರು, ರಾಜೇಶ ಹಿರೇಮಠ, ಮೌಲಾನ ತಾಜುದ್ದೀನ್, ಅಭಿಯಾನದ ಸಂಚಾಲಕರಾದ ಬಾಲಕೃಷ್ಣ ನಾಯ್ಡು, ಮಲ್ಲನಗೌಡ ಮಾವಿನಮಡು, ವೀರಶೈವ ಸಮಾಜದ ಅಧ್ಯಕ್ಷ ಟಿ.ಪಂಪನಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಫ್.ಮಸ್ಕಿ ಉಪಸ್ಥಿತರಿದ್ದರು.

ಪಂಪಯ್ಯಸ್ವಾಮಿ ಸಾಲಿಮಠ ನಿರೂಪಿಸಿದರು.

ಸಿಂಧನೂರು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂಬ ಬೇಡಿಕೆಯ ಕುರಿತು ಜ.3ರಂದು ಅಂಬಾಮಠಕ್ಕೆ ಬರುವ ಮುಖ್ಯಮಂತ್ರಿ ಸಚಿವರೊಂದಿಗೆ ಚರ್ಚಿಸಿ ಮನವಿ ಪತ್ರ ಸಲ್ಲಿಸಲು ತೀರ್ಮಾನಿಸಲಾಗಿದೆ
ಹಂಪನಗೌಡ ಬಾದರ್ಲಿ ಶಾಸಕ ಸಿಂಧನೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.