ಸಿರವಾರ: ತುಂಗಭದ್ರಾ ನೀರಾವರಿ ವಲಯದ ಹಂಗಾಮಿ ಕಾರ್ಮಿಕರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿ ಸುವಂತೆ ಒತ್ತಾಯಿಸಿ ತುಂಗಭದ್ರಾ ನೀರಾವರಿ ವಲಯ ಹಂಗಾಮಿ ಕಾರ್ಮಿಕ ಸಂಘದ (ಟಿಯುಸಿಐ) ಪದಾಧಿಕಾರಿಗಳು ರಸ್ತೆಯಲ್ಲಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ತುಂಗಭದ್ರಾ ನೀರಾವರಿ ವಲಯದಲ್ಲಿ ನಡೆದ ಭ್ರಷ್ಟಾಚಾರದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನೀರಾವರಿ ಇಲಾಖೆ ಇಇ ವಿಜಯಲಕ್ಷ್ಮಿ ಪಾಟೀಲ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಬೇಕು. 2025ರ ಸಾಲಿನಲ್ಲಿ ಕಾರ್ಮಿಕರಿಗೆ ನೀಡಬೇಕಾದ 80 ದಿನಗಳ ಬಾಕಿ ವೇತನ ತಕ್ಷಣ ಬಿಡುಗಡೆ ಮಾಡಬೇಕು. 2026ರ ಜನವರಿ, ಫೆಬ್ರುವರಿ ಹಾಗೂ ಮಾರ್ಚ್ ವೇತನವನ್ನು ಪಾವತಿಸಬೇಕು. ಕಾರ್ಮಿಕರ ಹಿತದೃಷ್ಟಿಯಿಂದ ಗುತ್ತಿಗೆ ಪದ್ಧತಿಯನ್ನು ಸಂಪೂರ್ಣವಾಗಿ ರದ್ದುಪಡಿಸಿ, ಸಹಕಾರಿ ಪದ್ಧತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಲಾಯಿತು.

ಪಟ್ಟಣದ ನೀರಾವರಿ ಇಲಾಖೆ ಕಚೇರಿಯಿಂದ ಬಸವ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಬಸವ ವೃತ್ತದಲ್ಲಿ ಒಂದು ಗಂಟೆಗೂ ಅಧಿಕ ಸಮಯ ರಸ್ತೆಯಲ್ಲಿ ಸಂಚಾರ ತಡೆ ನಡೆಸಿ ಪ್ರತಿಭಟಿಸಲಾಯಿತು.

ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅಶೋಕ ಪವಾರ್ ಅವರಿಗೆ ಸಲ್ಲಿಸಲಾಯಿತು. ಟಿಯುಸಿಐನ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಿ. ಅಡವಿರಾವ್, ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಗೌಡ, ರಾಜ್ಯ ಕಾರ್ಯದರ್ಶಿ ಎಂ.ಗಂಗಾಧರ, ರುಕ್ಕಪ್ಪ ಮಾನವಿ, ಶರಣಪ್ಪ ಕವಿತಾಳ, ಹನುಮಂತಪ್ಪ ಸಿಂಧನೂರು,ಹನುಮಂತ ಸಿರವಾರ, ಬಸವರಾಜ, ವಿಂಡ್ ಪವರ್ ಕಾರ್ಮಿಕ ಮುಖಂಡ ರಮೇಶ, ಆದೇಶ ನಗನೂರು ರಾಯಚೂರು, ಖಾಜಾ ಸಾಬ್ ಕವಿತಾಳ, ನರಸಪ್ಪ ಯಾರಗೇರಾ, ಶಫಿ ಯರಮರಸ್, ಚಾಂದ್ ಗಿಲ್ಲೇಸುಗೂರು, ಮುದುಕಪ್ಪ ಕಲ್ಲೂರು, ಹುಲಿಗೆಪ್ಪ ಕೊಟ್ನೆಕಲ್ ಪ್ರತಿಭಟನೆಯಲ್ಲಿ ಪಾಲ್ಗೊಂ ಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-32-639260698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.