ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುರ್ವಿಹಾಳ ಪಟ್ಟಣ ಪಂಚಾಯಿತಿ: ಕಾಂಗ್ರೆಸ್‌ಗೆ ಗದ್ದುಗೆ

ಅಧ್ಯಕ್ಷರಾಗಿ ಕೆ.ಶ್ಯಾಮೀದಸಾಬ್ ಚೌದ್ರಿ ಉಪಾಧ್ಯಕ್ಷರಾಗಿ ಗಂಗಮ್ಮ ಭೋವಿ ಆಯ್ಕೆ
Published : 30 ಆಗಸ್ಟ್ 2024, 16:16 IST
Last Updated : 30 ಆಗಸ್ಟ್ 2024, 16:16 IST
ಫಾಲೋ ಮಾಡಿ
Comments

ತುರ್ವಿಹಾಳ: ಸ್ಥಳೀಯ ಪಟ್ಟಣ ಪಂಚಾಯಿತಿ ಅಧಿಕಾರ ಕಾಂಗ್ರೆಸ್ ಪಾಲಾಗಿದೆ. ನೂತನ ಅಧ್ಯಕ್ಷರಾಗಿ ಕೆ.ಶ್ಯಾಮೀದಸಾಬ್ ಚೌದ್ರಿ ಹಾಗೂ ಉಪಾಧ್ಯಕ್ಷರಾಗಿ ಗಂಗಮ್ಮ ಭೋವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು, ಒಟ್ಟು 14 ಸದಸ್ಯರಲ್ಲಿ ಬಿಜೆಪಿಯ ಒಬ್ಬ ಸದಸ್ಯೆ ಗೈರಾಗಿದ್ದರು ಉಳಿದ 13 ಕಾಂಗ್ರೆಸ್ ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಹಾಜರಿದ್ದರು.

ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕೆ.ಶ್ಯಾಮೀದಸಾಬ್ ಚೌದ್ರಿ ಹಾಗೂ ಪರಿಶಿಷ್ಠ ಜಾತಿಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಗಂಗಮ್ಮ ಭೋವಿ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಹಶೀಲ್ದಾರ್ ಅರುಣ ಕುಮಾರ ದೇಸಾಯಿ ಅವಿರೋಧದ ಆಯ್ಕೆ ಘೋಷಿಸಿದರು. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಶಾಸಕ ಆರ್.ಬಸನಗೌಡ ತುರ್ವಿಹಾಳ ಸನ್ಮಾನಿಸಿ ಶುಭ ಹಾರೈಸಿದರು.

ಈ ವೇಳೆ ಪ.ಪಂ ಮುಖ್ಯಾಧಿಕಾರಿ ಸಾಬಣ್ಣ ಕಟ್ಟೆಕಾರ, ಮುಖಂಡರಾದ ಮಲ್ಲನಗೌಡ ದೇವರಮನಿ, ಶಿವನಗೌಡ ಗೋರೆಬಾಳ, ನಲ್ಲ ವೆಂಕಟೇಶ್ವರ ರಾವ್, ಮಂಟೆಪ್ಪ ಎಲೆಕೂಡ್ಗಿ, ಉಮರಸಾಬ್, ಮೌಲಪ್ಪಯ್ಯ, ಪಾರೂಖ್ ಸಾಬ್, ಬಾಪೂಗೌಡ ದೇವರಮನಿ, ಆರ್.ಸಿದ್ದನಗೌಡ ತುರ್ವಿಹಾಳ, ಶರಣಬಸವ ರಡ್ಡೇರ, ಶರಣಪ್ಪ ಹೊಸಗೌಡ್ರು, ಶರಣಬಸವ ಗಡೇದ, ಕರಿಯಪ್ಪ ವಿರುಪಾಪೂರ, ಸಿರಾಜ್ ಪಾಷಾ, ಯಲ್ಲಪ್ಪ ಭೋವಿ, ಫಕೀರಪ್ಪ ಭಂಗಿ, ಉಸ್ಮಾನ್ ಚೌದ್ರಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT