ಶುಕ್ರವಾರ, ಆಗಸ್ಟ್ 19, 2022
25 °C

ಕೋವಿಡ್: 191 ಜನರಿಗೆ ಸೋಂಕು: ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಭಾನುವಾರ ಮತ್ತೆ 191 ಜನರಿಗೆ ಕೋವಿಡ್ ದೃಢಪಟ್ಟಿದೆ. ಇದುವರೆಗೂ 9,421 ಜನರಿಗೆ ಕೋವಿಡ್ ದೃಢಪಟ್ಟಂತಾಗಿದೆ. 136 ಜನರು ಸೇರಿದಂತೆ ಇದೂವರೆಗೆ ಒಟ್ಟು 7,684 ಜನರು ಕೋವಿಡ್‌ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಭಾನುವಾರ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 32, ಲಿಂಗಸುಗೂರು 46, ಮಾನ್ವಿ 39, ಸಿಂಧನೂರು 54 ಮತ್ತು ರಾಯಚೂರು ತಾಲ್ಲೂಕಿನಲ್ಲಿ 42 ಜನ ಸೇರಿದಂತೆ ಒಟ್ಟು 213 ಜನರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಭಾನುವಾರ ಬಂದ ವರದಿಗಳಲ್ಲಿ 1,377 ನೆಗೆಟಿವ್ ಬಂದಿವೆ. ಇದುವರೆಗೆ ಒಟ್ಟು 94,961 ಜನರ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಈ ಪೈಕಿ 84,901 ವರದಿಗಳು ನೆಗೆಟಿವ್ ಬಂದಿವೆ. ಉಳಿದ 426 ಸ್ಯಾಂಪಲ್‍ಗಳ ಫಲಿತಾಂಶ ಇನ್ನೂ ಬರಬೇಕಿದೆ. ಜಿಲ್ಲೆಯಲ್ಲಿ ಒಟ್ಟು 313 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‍ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು