ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ಕಳ್ಳರ ಬಂಧನ: 25 ಬೈಕ್‌ಗಳು ವಶಕ್ಕೆ

Last Updated 1 ಸೆಪ್ಟೆಂಬರ್ 2022, 15:36 IST
ಅಕ್ಷರ ಗಾತ್ರ

ಜಾಲಹಳ್ಳಿ: ಬಳ್ಳಾರಿ, ಸಿಂಧನೂರು, ರಾಯಚೂರು, ಶಹಾಪುರ ಸೇರಿದಂತೆ ವಿವಿಧೆಡೆ ಕಳ್ಳತನ ಮಾಡುತ್ತಿದ್ದ ಇಬ್ಬರು ಬೈಕ್‌ ಕಳ್ಳರನ್ನು ಜಾಲಹಳ್ಳಿ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದು, ಆರೋಪಿಗಳಿಂದ ಒಟ್ಟು 25 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಜಾಗೀರ ಜಾಡಲದಿನ್ನಿ ಗ್ರಾಮದ ವಿರೂಪಾಕ್ಷಿ ಮುದುಕಪ್ಪ ಬಲ್ಲಟಗಿ ಹಾಗೂ ಬೂಮನಗುಂಡ ಗ್ರಾಮದ ಪವನಕುಮಾರ ಲಕ್ಷ್ಮಣ ಕಲ್ಲಂಗೇರ ಬಂಧಿತ ಆರೋಪಿಗಳು. ಹಟ್ಟಿ ಚಿನ್ನದಗಣಿ ಮಾರ್ಗದಿಂದ ಜಾಲಹಳ್ಳಿ ಪಟ್ಟಣದ ಬಸವೇಶ್ವರ ವೃತ್ತದ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರು ಆರೋಪಿಗಳಿದ್ದ ಬೈಕ್‌ಗೆ ನಂಬರ್‌ ಪ್ಲೇಟ್‌ ಇರಲಿಲ್ಲ. ಕರ್ತವ್ಯದಲ್ಲಿದ್ದ ಪಿಎಸ್‌ಐ ಸುಜಾತಾ ಮತ್ತು ಠಾಣೆಯ ಸಿಬ್ಬಂದಿಯು ಸಂಶಯಗೊಂಡು ಇಬ್ಬರನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಿಸಿದಾಗ, ಒಟ್ಟು ₹12 ಲಕ್ಷ ಮೌಲ್ಯದ 25 ಬೈಕ್‌ಗಳನ್ನು ಕಳ್ಳತನ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ. ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಜಾಲಹಳ್ಳಿ ಠಾಣೆಯ ಪೊಲೀಸರು ಆರೋಪಿಗಳಿಂದ ಕಳ್ಳತನದ ಬೈಕ್‌ಗಳನ್ನೆಲ್ಲ ವಶಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT