ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಧಿಕೃತ ಅಂಗಡಿಗಳ ತೆರವಿಗೆ ಒತ್ತಾಯ

Last Updated 4 ಸೆಪ್ಟೆಂಬರ್ 2021, 11:09 IST
ಅಕ್ಷರ ಗಾತ್ರ

ಹಟ್ಟಿ ಚಿನ್ನದಗಣಿ: ಹಟ್ಟಿ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿನ ಅನಧಿಕೃತ ಡಬ್ಬ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದ ಪದಾಧಿಕಾರಿಗಳು ಪಂ‌ಚಾಯಿತಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ರಸ್ತೆ ಪಕ್ಕದಲ್ಲಿ ಟ್ಯಾಕ್ಸಿಗಳು ನಿಲ್ಲಿಸಲು ಪಟ್ಟಣ ಪಂಚಾಯಿತಿ ವತಿಯಿಂದ ಸ್ಥಳಾವಕಾಶ ಕಲ್ಪಿಸಿಕೊಡಲಾಗಿತ್ತು. ಆದರೆ, ಡಬ್ಬ ಅಂಗಡಿ ಮಾಲೀಕರು ರಸ್ತೆಯನ್ನು ಆಕ್ರಮಿಸಿಕೊಂಡಿರುವುದರಿಂದ ಟ್ಯಾಕ್ಸಿಗಳನ್ನು ನಿಲ್ಲಿಸಲು ತೊಂದರೆಯಾಗಿದೆ.

ಕೂಡಲೇ ರಸ್ತೆ ಒತ್ತುವರಿ ಮಾಡಿಕೊಂಡ ಅಂಗಡಿಗಳನ್ನು ತೆರವು ಮಾಡಬೇಕು. ನಿರ್ಲಕ್ಷಿಸಿದರೆ ಪಟ್ಟಣ ಪಂಚಾಯಿತಿ ಮುಂದೆ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಭಾರತೀಯ ಮಜ್ದೂರ್ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜುಗೌಡ ಗುರಿಕಾರ, ಖಾದರ್ಪಾಶ, ಮೌನೇಶ, ಯಲ್ಲಪ್ಪ, ದವಲಸಾಭ್, ಮೌಲಸಾಬ್, ಬಾಬುನಾಯಿಕೊಡಿ, ಬಾಬುಬಾಯಿ (ಕೋಮಲ್) ಸೇರಿದಂತೆ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT