ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ದಾಖಲೆ ಇಲ್ಲದ ₹8.30 ಲಕ್ಷ ನಗದು ವಶ

Published 23 ಮಾರ್ಚ್ 2024, 15:19 IST
Last Updated 23 ಮಾರ್ಚ್ 2024, 15:19 IST
ಅಕ್ಷರ ಗಾತ್ರ

ರಾಯಚೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಿ ಪೊಲೀಸರು ದಾಖಲೆ ಇಲ್ಲದ ₹8.30 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ರಾಯಚೂರು ತಾಲ್ಲೂಕಿನ ಸಿಂಗನೋಡಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ತಪಾಸಣೆ ನಡೆಸಿದ ಸಂದರ್ಭದಲ್ಲಿ ಮಾರುತಿ ಶಿಫ್ಟ್‌ ಡಿಸೈರ್‌ ಕಾರಿನ ಡಿಕ್ಕಿಯಲ್ಲಿ ಸಾಗಿಸುತ್ತಿದ್ದ ₹4 ಲಕ್ಷ, ಯರಗೇರಾ ಚೆಕ್‌ಪೋಸ್ಟ್‌ನಲ್ಲಿ ₹1.30 ಲಕ್ಷ ಹಾಗೂ ಸಿಂಧನೂರು ತಾಲ್ಲೂಕಿನ ಮಣ್ಣಿಕೆರೆ ಕ್ಯಾಂಪ್‌ನಲ್ಲಿ ₹3 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT