ರಾಯಚೂರು: ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ನಗರದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಭಾರತ್ ಸ್ಟೇಷನ್ ಕಾಮಗಾರಿಯನ್ನು ಪರಿಶೀಲಿಸಿದರು.

‘ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ರೈಲು ನಿಲ್ದಾಣದಲ್ಲಿ ಮೂಲಸೌಕರ್ಯ ಹೆಚ್ಚಿಸಬೇಕು‘ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಹೊಸ ಯೋಜನೆ ಪ್ರಕಾರ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ, ಪಾರ್ಕಿಂಗ್, ಮಕ್ಕಳಿಗೆ ಆಟದ ವಲಯ, ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಸ್ಥಳಾವಕಾಶಗಳ ಇರಲಿದೆ. ಸಾರ್ವಜನಿಕರಿಂದ ಯಾವುದೇ ದೂರಗಳು ಬರದ ರೀತಿಯಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು‘ ಎಂದು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ರೈಲ್ವೆ ಡಿಆರ್‌ಎಂ ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಸಲಹಾ ಸಮಿತಿ ರಚಿಸಿ ಚರ್ಚಿಸಿ ಸ್ಥಳೀಯ ಮಟ್ಟದಲ್ಲಿ ಕೆಲ ತೀರ್ಮಾನಗಳನ್ನು ತಗೆದುಕೊಳ್ಳಬೇಕು. ಅವರಿಂದ ಸಲಹೆಗಳನ್ನು ಪಡೆದುಕೊಂಡರೆ ಜನರಿಗೆ ಇನ್ನಷ್ಟು ಅನುಕೂಲವಾಗಲಿಗೆ. ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗಲಿದೆ‘ ಎಂದು ತಿಳಿಸಿದರು.

ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ ಎಸ್.ಪಾಟೀಲ, ಮಾಜಿ ಶಾಸಕ ಕೆ.ಶಿವನಗೌಡ ನಾಯಕ, ಬಸನಗೌಡ ಬ್ಯಾಗವಾಟ್, ಗಂಗಾಧರ ನಾಯಕ, ರೈಲ್ವೆ ಸಲಹಾ ಮಂಡಳಿ ಸದಸ್ಯ ಬಾಬುರಾವ್ ರೈಲ್ವೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ರೈಲ್ವೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.