ಕೇಂದ್ರದ ಭಾಷಾ ನೀತಿ ತಿದ್ದುಪಡಿಗೆ ಮನವಿ

7

ಕೇಂದ್ರದ ಭಾಷಾ ನೀತಿ ತಿದ್ದುಪಡಿಗೆ ಮನವಿ

Published:
Updated:

ರಾಯಚೂರು: ಸಂವಿಧಾನದ 8ನೇ ಪರಿಚ್ಛೇದದಲ್ಲಿರುವ ಎಲ್ಲ ಭಾಷೆಗಳಿಗೂ ಕೇಂದ್ರದ ಅಧಿಕೃತ ಸ್ಥಾನಮಾನ ಸಿಗುವಂತೆ ಕೇಂದ್ರದ ಭಾಷಾ ನೀತಿಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಹಿಂದಿಯೇತರ ರಾಜ್ಯಗಳ ಜನರ ಮೇಲೆ ಹಿಂದಿಯನ್ನು ಹೇರುವ ನಿರಂತರ ಪ್ರಯತ್ನಗಳು ನಡೆಯುತ್ತಿದ್ದು, ಇತರೆ ಭಾಷೆಗಳಿಗೆ ಹಿನ್ನೆಡೆಯಾಗಿದೆ. ಕರ್ನಾಟಕದಲ್ಲಿ ಕನ್ನಡ, ಕನ್ನಡಿಗನಿಗೆ ಸಾರ್ವಭೌಮತ್ವ ಸವಾಲಾಗಿದ್ದು, ಕೇಂದ್ರ ಸರ್ಕಾರಿ ನೌಕರಿಗೆ ಕನ್ನಡಿಗರೇತರನ್ನು ನೇಮಕ ಮಾಡಿಕೊಳ್ಳುತ್ತಿದೆ. ಕರ್ನಾಟಕದಲ್ಲಿ ಕನ್ನಡಿಗರನ್ನೇ ಎರಡನೇ ದರ್ಜೆಯ ಪ್ರಜೆಗಳಂತೆ ಕಾಣಲಾಗುತ್ತಿದೆ ಎಂದು ಆರೋಪಿಸಿದರು.

ಸ್ಥಳೀಯ ನುಡಿಯ ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವ ಮೂಲಕ ದೇಶದಲ್ಲಿನ ಭಾಷಾ ವೈವಿಧ್ಯತೆಯನ್ನು ಗೌರವಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಪದಾಧಿಕಾರಿಗಳಾದ ಎಂ.ವಿನೋದರೆಡ್ಡಿ, ಜಿಲಾನಿಪಾಷ, ವೆಂಕಟೇಶ, ರವಿಕುಮಾರ, ಅಲ್ಲಾವುದ್ದೀನ್, ರಮೇಶ, ಜಿಂದಪ್ಪ, ಕೊಂಡಪ್ಪ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !