ಅಕ್ರಮ ಮರಳು ದಂಧೆ ಕಡಿವಾಣಕ್ಕೆ ಕುಂದು ಕೊರತೆ ಸಭೆಯಲ್ಲಿ ಒತ್ತಾಯ

7
ಜಿ.ಪಂ. ಸಿಇಒ ನಲಿನ್ ಅತುಲ್ ಅಧ್ಯಕ್ಷತೆಯಲ್ಲಿ ಸಭೆ

ಅಕ್ರಮ ಮರಳು ದಂಧೆ ಕಡಿವಾಣಕ್ಕೆ ಕುಂದು ಕೊರತೆ ಸಭೆಯಲ್ಲಿ ಒತ್ತಾಯ

Published:
Updated:
Deccan Herald

ರಾಯಚೂರು: ತಾಲ್ಲೂಕಿನ ಕಾಡ್ಲೂರು ಗ್ರಾಮದ ಹತ್ತಿರದ ಕೃಷ್ಣಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಡ್ಲೂರಿನ ಮೋಹನರಾನ್‌ ಆರೋಪಿಸಿದರು.

ಜಿಲ್ಲಾಡಳಿತದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಾರ್ವಜನಿಕರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್‌ಗೆ ಮನವಿ ಸಲ್ಲಿಸಿ, ವಿಷಯ ಮನವರಿಕೆ ಮಾಡಿದರು.

ನದಿಯಲ್ಲಿ ಜೆಸಿಬಿಗಳ ಮೂಲಕ ಮರಳು ತೆಗೆದು ವಾಹನಗಳಲ್ಲಿ ಸಾಗಿಸಿ ಬೇರೆಡೆ ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ. ರಾಯಸಧನ ಪಾವತಿಸದೇ ಮರಳು ಸಾಗಣೆ ಮಾಡುವ ಮಾಹಿತಿಯಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸುತ್ತಿಲ್ಲ. ಇನ್ನಾದರೂ ಕ್ರಮ ಜರುಗಿಸಿ ಅಕ್ರಮ ಮರಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಮುಖಂಡ ರವೀಂದ್ರನಾಥ ಅರ್ಜಿ ಸಲ್ಲಿಸಿ ಮಾತನಾಡಿ, ಆರ್‌ಟಿಇ ಕಾಯ್ದೆಯಡಿ ಖಾಸಗಿ ಶಾಲೆಯಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಇನ್ನೂ ಕನ್ನಡ ಪುಸ್ತಕ ವಿತರಣೆ ಮಾಡಿಲ್ಲ. ಆದ್ದರಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ತ್ವರಿತವಾಗಿ ಪುಸ್ತಕ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಕಳೆದ 9ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಏಕಾಏಕಿ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಅಡುಗೆ ಸಹಾಯಕಿ ಲಕ್ಷ್ಮೀಬಾಯಿ ಆರೋಪಿಸಿದರು.

ಕೆ.ಇ.ಕುಮಾರ ಮಾತನಾಡಿ, ನಗರದ ನ್ಯಾಯಬೆಲೆ ಅಂಗಡಿಗಳು ನಿಮಯಗಳನ್ನು ಪಾಲನೆ ಮಾಡುತ್ತಿಲ್ಲ. ಒಂದು ಅಂಗಡಿಯೂ ನಿಯಮಿತವಾಗಿ ತೆಗೆಯುವುದಿಲ್ಲ. ಒಂದೆರಡು ದಿನಗಳು ಮಾತ್ರ ಪಡಿತರ ವಿತರಿಸಲಾಗುತ್ತಿದ್ದು, ಸಮರ್ಪಕವಾಗಿ ವಿತರಿಸದೇ ಪಡಿತರ ಧಾನ್ಯವನ್ನು ಮಾರಾಟ ಮಾಡಿಕೊಳ್ಳಲಾಗುತ್ತಿದೆ ಎಂದು ದೂರಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ನಗರಾಭಿವೃದ್ಧಿ ಕೋಶದ ಅಧಿಕಾರಿ ಈರಣ್ಣ ಬಿರಾದಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರು, ಪೌರಾಯುಕ್ತ ರಮೇಶ ನಾಯಕ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !