ಮಂಗಳವಾರ, ಮಾರ್ಚ್ 31, 2020
19 °C

ಮದ್ಯ ನಿಷೇಧಿಸಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಮದ್ಯ ನಿಷೇಧಕ್ಕಾಗಿ ಒತ್ತಾಯಿಸಿ ಹಮ್ಮಿಕೊಂಡ ಪಾದಯಾತ್ರೆಯಲ್ಲಿ ಮೃತಪಟ್ಟಿರುವ ರೇಣುಕಮ್ಮ ಸಾವಿನಿಂದಾದರೂ ಎಚ್ಚೆತ್ತುಕೊಂಡು ಮದ್ಯ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಈಚೆಗೆ ಮನವಿ ಸಲ್ಲಿಸಿದರು.

ಚಿತ್ರದುರ್ಗದಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಟಿದ್ದ ರೇಣಕುಮ್ಮ ಮೃತಪಟ್ಟ ನಂತರವೂ ಯಾವುದೇ ಸಚಿವರು ಸ್ಥಳಭೇಟಿ ನೀಡಿಲ್ಲ. ಮಹಿಳೆಯರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕಡಿತದಿಂದ ಆರ್ಥಿಕ ನಷ್ಟ, ಅನಾರೋಗ್ಯ ಸೇರಿದಂತೆ ಸಮಾಜದ ಸ್ವಾಸ್ಥ್ಯ ಹಾಳಾಗಿರುವುದು ಸರ್ಕಾರದ ಅಂಕಿ ಅಂಶಗಳಿಂದ ತಿಳಿದುಬರಲಿದೆ ಎಂದು ದೂರಿದರು.

ಮೃತಳ ಕುಟುಂಬಕ್ಕೆ ಪರಿಹಾರ ನೀಡಬೇಕು. ಜೊತೆಗೆ ಮದ್ಯ ನಿಷೇಧ ಮಾಡಬೇಕು. ಲಕ್ಷಾಂತರ ಕುಟುಂಬಗಳಲ್ಲಿ ನೆಮ್ಮದಿಯ ವಾತಾವರಣ ಮೂಡಿಸಬೇಕು ಎಂದು ಆಗ್ರಹಿಸಿದರು.

ಜನಾರ್ದನ ಹಳ್ಳಿಬೆಂಚಿ, ತಾಯಪ್ಪ, ಕೆ.ಪಿ.ಅನಿಲಕುಮಾರ, ವೆಂಕಟೇಶ ಭಂಡಾರಿ, ವೀರಮ್ಮ, ಶೋಭಾ, ಅಮರಮ್ಮ, ವೀರಶೇ, ರಾಮಣ್ಣ, ಪ್ರಭಾವತಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು