ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧಕ್ಕೆ ಒತ್ತಾಯ

ಮದ್ಯ ನಿಷೇಧ ಆಂದೋಲನ ಕರ್ನಾಟಕದಿಂದ ಪ್ರತಿಭಟನೆ
Last Updated 2 ಅಕ್ಟೋಬರ್ 2019, 13:40 IST
ಅಕ್ಷರ ಗಾತ್ರ

ರಾಯಚೂರು: ರಾಜ್ಯದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕ ಸದಸ್ಯರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಮೂರು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದ್ದು, ಸರ್ಕಾರಕ್ಕೆ ಮನವಿ ಕೂಡ ಸಲ್ಲಿಸಲಾಗಿದೆ. ಆದರೆ, ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಮದ್ಯ ಸೇವಿಸುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಇದರಿಂದ ಬಡಕುಟುಂಬಗಳು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಸಂವಿಧಾನದ ಅನುಚ್ಛೇದ 47ರ ಪ್ರಕಾರ ಮದ್ಯ ಮಾರಾಟ ನಿಷೇಧಿಸಬೇಕು ಎಂಬ ಆದೇಶವಿದ್ದು, ಮದ್ಯ ವ್ಯಸನಕ್ಕೆ ಜನರನ್ನು ಬಲಿಯಾಗಿಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಎಂಟು ವರ್ಷಗಳಲ್ಲಿ ಅಬಕಾರಿ ಇಲಾಖೆಯ ಆದಾಯ ₹ 9 ಸಾವಿರ ಕೋಟಿಯಿಂದ ₹ 20 ಸಾವಿರ ಕೋಟಿಗೆ ಏರಿಕೆಯಾಗಿರುವುದ್ದು ಗ್ರಾಮೀಣ ಪ್ರದೇಶದಲ್ಲಿ ಅಕ್ರಮವಾಗಿ ಮಾರಾಟ ಮಾಡುವುದರಿಂದ ರಾಜ್ಯದಲ್ಲಿ ಯುವಕರು ಕೂಡ ಮದ್ಯ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ ಎಂದು ದೂರಿದರು.

ಎಲ್ಲ ಜಾತಿಯವರನ್ನು ಒಳಗೊಂಡ ಸಾಮಾಜಿಕ ನ್ಯಾಯ ಸಮಿತಿಯನ್ನು ಎಲ್ಲ ಗ್ರಾಮಗಳಲ್ಲಿ ರಚನೆ ಮಾಡಬೇಕು. ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಚಾಲಕರಾದ ವಿದ್ಯಾ ಪಾಟೀಲ, ಗುರುರಾಜ, ಮೋಕ್ಷಮ್ಮ, ವಿರುಪಮ್ಮ, ರೇಣುಕಾ, ಲಕ್ಷ್ಮಣಗೌಡ ಕಡಗಂದೊಡ್ಡಿ, ಎಚ್.ಪದ್ಮಾ, ಜಾನ್‌ವೆಸ್ಲಿ, ಅಹ್ಮದ್, ಬಸವರಾಜ, ರಾಮವ್ವ, ಪಲ್ಲವಿ, ಗೋವಿಂದು, ಪ್ರಸಾದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT