ಮೊರಾರ್ಜಿ ದೇಸಾಯಿ ಶಾಲೆ ನಿರ್ಮಾಣಕ್ಕೆ ಒತ್ತಾಯ

ಸೋಮವಾರ, ಮೇ 20, 2019
30 °C

ಮೊರಾರ್ಜಿ ದೇಸಾಯಿ ಶಾಲೆ ನಿರ್ಮಾಣಕ್ಕೆ ಒತ್ತಾಯ

Published:
Updated:

ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕು ಗಬ್ಬೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡವನ್ನು ಬೇರೆ ಕಡೆಗೆ ಸ್ಥಳಾಂತರಿಸಬಾರದು. ಕೂಡಲೇ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಸ್ವಂತ ಕಟ್ಟಡದಲ್ಲಿಯೇ ಶಾಲೆ ಆರಂಭಿಸಬೇಕು ಎಂದು ದಲಿತ ಮುಖಂಡ ರಾಜಪ್ಪ ಸಿರವಾರಕರ್‌ ಒತ್ತಾಯಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಗೈರಾಣಿ ಭೂಮಿಯಲ್ಲಿ 8 ಎಕರೆ 17 ಗುಂಟೆ ಜಮೀನನ್ನು ವಸತಿ ಶಾಲೆ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿಯು 2015 ರಲ್ಲಿಯೇ ಮಂಜೂರಿ ಮಾಡಿದ್ದಾರೆ. ವಸತಿ ಶಾಲೆ ನಿರ್ಮಾಣವೂ ಸೇರಿದಂತೆ ₹16.32 ಕೋಟಿ ವಿವಿಧ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಅಡಿಗಲ್ಲು ಶಿಲಾಫಲಕ ಅನಾವರಣ ಮಾಡಿದ್ದಾರೆ. ಆದರೆ, ಕಾಮಗಾರಿ ಮಾತ್ರ ನಡೆಯುತ್ತಿಲ್ಲ ಎಂದು ಹೇಳಿದರು.

ಜೆಡಿಎಸ್‌ ಮುಖಂಡ ಬುಡ್ಡನಗೌಡ ಅವರು ಶಾಲೆ ಸ್ಥಳಾಂತರಕ್ಕೆ ಒತ್ತಾಯಿಸಿರುವುದು ಖಂಡನೀಯ. ಅಕ್ರಮ ಸಕ್ರಮದಲ್ಲಿ ಸಾವಿತ್ರಮ್ಮ ಸೂಗರಯ್ಯ ಅವರಿಗೆ ಭೂಮಿ ಮಂಜೂರಿಯಾಗಿದೆ ಎಂದು ತಿಳಿಸಲಾಗಿದೆ. ಆದರೆ, ಶಾಲೆ ನಿರ್ಮಾಣದ ಜಮೀನಿಗೂ ಅಕ್ರಮ ಸಕ್ರಮಕ್ಕೂ ಸಂಬಂಧವಿಲ್ಲ ಎಂದರು. ದಲಿತ ವಿದ್ಯಾರ್ಥಿಗಳು ಕಲಿಯವುದಕ್ಕೆ ಆಸ್ಪದ ಆಗಬಾರದು ಎನ್ನುವ ದುರುದ್ದೇಶ ಇಟ್ಟುಕೊಂಡು ಅಧಿಕಾರಿಗಳನ್ನು ದಾರಿ ತಪ್ಪಿಸುವ ಕೆಲಸವನ್ನು ಬುಡ್ಡನಗೌಡ ಅವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಶಾಲೆ ಸ್ಥಳಾಂತರಕ್ಕೆ ಮುಂದಾದರೆ ದಲಿತ ಸಂಘಟನೆಗಳ ವೇದಿಕೆ ಮತ್ತು ಟಿಪ್ಪು ಸುಲ್ತಾನ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಫಾರೂಕ್‌ಗೌಡ, ಶಾಂತಕುಮಾರ ಹೊನ್ನಟಗಿ, ಮರಿಯಪ್ಪ ಮುದುಕಲ್‌, ಹನುಮಂತ ಗಣೇಕಲ್‌ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !