ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿ ವ್ಯಾಪಾರಕ್ಕೆ ಅವಕಾಶ ನೀಡಲು ಒತ್ತಾಯ

ಹೈದರಾಬಾದ್ ಕರ್ನಾಟಕ ಬೀದಿ ವ್ಯಾಪಾರಿಗಳ ಸಂಘದಿಂದ ಪ್ರತಿಭಟನೆ
Last Updated 22 ಆಗಸ್ಟ್ 2019, 11:36 IST
ಅಕ್ಷರ ಗಾತ್ರ

ರಾಯಚೂರು: ನಗರದಲ್ಲಿ ಬೀದಿ ವ್ಯಾಪಾರಸ್ಥರನ್ನು ತೆರವುಗೊಳಿಸಿದ ನಗರಸಭೆಯವರು ಪುನಃ ವ್ಯಾಪಾರ ನಡೆಸಲು ಅನುಕೂಲ ಮಾಡಬೇಕು ಎಂದು ಒತ್ತಾಯಿಸಿ ಹೈದರಾಬಾದ್ ಕರ್ನಾಟಕ ಬೀದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ವ್ಯಾಪಾರಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಬೀದಿ ವ್ಯಾಪಾರಿಗಳ ಹಿತದೃಷ್ಟಿಯಿಂದ ’ಸ್ಟ್ರೀಟ್‌ ವೆಂಡರ್ಸ್‌ ಆ್ಯಕ್ಟ್‌ 2014ರ ಮಸೂದೆ’ ಜಾರಿಗೊಳಿಸಿದ್ದು, ಆದರೆ, ನಗರಸಭೆಯವರು ಬೀದಿ ಬದಿ ವ್ಯಾಪಾರಸ್ಥರ ಏಳಿಗೆಗೆ ಯಾವುದೇ ಕ್ರಮ ವಹಿಸದೇ ಬಡವರ ಮೇಲೆ ದರ್ಪವನ್ನು ತೋರಿಸಲಾಗಿದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಆರೋಪಿಸಿದರು.

ನಾಲ್ಕು ತಿಂಗಳಿಗೊಮ್ಮೆ ಪೊಲೀಸ್ ಬಂದೋಬಸ್ತ್‌ನಲ್ಲಿ ನಗರಸಭೆ ಬೀದಿ ವ್ಯಾಪಾರಿಗಳನ್ನು ತೆರವು ಮಾಡುತ್ತಿದೆ. ವ್ಯಾಪಾರ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದ ವ್ಯಾಪಾರಿಗಳು ನಗರಸಭೆಯ ಧೋರಣೆಯಿಂದ ತೊಂದರೆ ಅನುಭವಿಸುತ್ತಿದ್ದು, ಬೀದಿಗೆ ಬೀಳುವಂತಾಗಿದೆ. ಐದು ಸಾವಿರ ಕುಟುಂಬಗಳು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಅಧ್ಯಕ್ಷ ಸೈಯದ್ ಮೊಹ್ಮದ್, ಸುನೀಲ್, ಸಂತೋಷ, ಜಾವೀದ್, ಖಾದರ್, ಪ್ರಕಾಶ, ಪದ್ಮಾವತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT