ಭಾನುವಾರ, ಮೇ 29, 2022
30 °C

ರಾಯಚೂರು: 12 ತಾಸು ವಿದ್ಯುತ್ ಪೂರೈಸಿ: ರೈತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ತಾಲ್ಲೂಕಿನ ಚಂದ್ರಬಂಡಾ ಹೋಬಳಿ ಸೇರಿ ಜಿಲ್ಲೆಯಾದ್ಯಂತ 12 ತಾಸು ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜೆಸ್ಕಾಂ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಜೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ತಾಲ್ಲೂಕಿನ ಚಂದ್ರಬಂಡಾ ಹೋಬಳಿಯಲ್ಲಿ ಪ್ರತಿನಿತ್ಯ 12 ತಾಸು ಮೂರು ಫೇಸ್ ಮೂಲಕ ವಿದ್ಯುತ್ ಸರಬರಾಜು ಮಾಡಲಾಗುತ್ತಿತ್ತು. ಆದರೆ ಕಳೆದ ಕೆಲ ದಿನಗಳಿಂದ ಕೇವಲ 8 ತಾಸು ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಅಲ್ಲದೇ ಅನೇಕ ಬಾರಿ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಶೇಂಗಾ, ತರಕಾರಿ, ಭತ್ತ ಬೆಳೆಗಳನ್ನು ರೈತರು ಹೆಚ್ಚಾಗಿ ಬೆಳೆದಿದ್ದು, ವಿದ್ಯುತ್ ವ್ಯತ್ಯಯದಿಂದ ಬೆಳೆಗಳಿಗೆ ಸಮರ್ಪಕ ನೀರು ದೊರೆಯದೇ ರೈತರು ಆತಂಕ ಎದುರಿಸುತ್ತಿದ್ದಾರೆ ಎಂದು ದೂರಿದರು.

12 ತಾಸು ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಾದ್ಯಂತ ನಿಗದಿತ ಸಮಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾದಲ್ಲಿ ಅದನ್ನು ಉಳಿದ ಸಮಯದಲ್ಲಿ ಸರಿದೂಗಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗಂಗಾ ಕಲ್ಯಾಣ ಮತ್ತು ಇತರೆ ಯೋಜನೆಗಳಲ್ಲಿ ರೈತರಿಗೆ ಸರ್ಕಾರದಿಂದ ಕೊಳವೆ ಬಾವಿ ಕೊರೆಸಿ ಅನೇಕ ದಿನಗಳಾದರೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಕೂಡಲೇ ಜಿಲ್ಲೆಯಾದ್ಯಂತ ಎಲ್ಲಾ ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ, ವಿಭಾಗಿಯ ಕಾರ್ಯದರ್ಶಿ ಮಾಜೀದ್ ಸಾಬ್, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ, ನರಸಿಂಗರಾವ ಕುಲಕರ್ಣಿ, ದೇವರಾಜ ನಾಯಕ, ನರಸಿಂಹಲು, ಬ್ರಹಮ್ಮ ಆಚಾರಿ, ಹೊನ್ನಪ್ಪ, ಉಸ್ಮಾನ್, ಮಹಾದೇವಪ್ಪ, ತಿಮ್ಮಪ್ಪ, ಮಲ್ಲಾರೆಡ್ಡಿ, ಬೂದಯ್ಯ ಸ್ವಾಮಿ ಗಬ್ಬೂರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು