ಎಪಿಎಂಸಿ ನಿವೇಶನ ಮರು ಹಂಚಿಕೆಗೆ ಒತ್ತಾಯ

7

ಎಪಿಎಂಸಿ ನಿವೇಶನ ಮರು ಹಂಚಿಕೆಗೆ ಒತ್ತಾಯ

Published:
Updated:

ರಾಯಚೂರು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿವೇಶನಗಳನ್ನು ಲೀಸ್ ಕಂ ಸೇಲ್ ಆಧಾರದಲ್ಲಿ ಕಾನೂನು ಬಾಹಿರವಾಗಿ ಹಂಚಿಕೆ ಮಾಡಲಾಗಿದ್ದು, ಇದನ್ನು ರದ್ದುಪಡಿಸಿ ಮರು ಹಂಚಿಕೆಗೆ ನಿರ್ದೇಶನ ಮಾಡಬೇಕು ಎಂದು ಆಗ್ರಹಿಸಿ ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಬುಧವಾರ ಮನವಿ ಸಲ್ಲಿಸಿದರು.

ನಗರದ ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಮನವಿ ಸಲ್ಲಿಸಿ, 2014 ರಲ್ಲಿ ನಿವೇಶನಗಳ ಹಂಚಿಕೆಗೆ ಅಧಿಸೂಚನೆ ಪ್ರಕಟಿಸಲಾಗಿತ್ತು. ಆದರೆ, ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆಸಲಾಗಿದೆ ಎಂದು ದೂರಿದರು.

ವರ್ತಕರಲ್ಲದವರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ಮೂರು ವರ್ಷ ಪರವಾನಿಗೆ ನವೀಕರಣ ಆಗದಿದ್ದರೂ ನಿವೇಶನ ನೀಡಲಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗಕ್ಕೆ ಅನ್ಯಾಯವಾಗಿದೆ. ನಿರ್ದೇಶಕರೊಬ್ಬರ ಒಂದೇ ಕುಟುಂಬದವರಿಗೆ ಹತ್ತು ನಿವೇಶನಗಳನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಲಾಗಿದೆ. ಆದ್ದರಿಂದ ಕಾನೂನಾತ್ಮಕವಾಗಿ ನಿವೇಶನಗಳ ಹಂಚಿಕೆಗೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಮಹಾವೀರ, ಮಹ್ಮದ್ ಶಾಹಖಾನ್, ಪ್ರಭು ನಾಯಕ, ಬಸವರಾಜ, ಕೆ.ವಿ.ಖಾಜಪ್ಪ, ಹನುಮಂತು, ಕೆ.ಶ್ರೀನಿವಾಸ, ಎಂ.ಎಚ್.ಪ್ರಶಾಂತಕುಮಾರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !