ಅನಧಿಕೃತ ಕಟ್ಟಡ ತೆರವಿಗೆ ಒತ್ತಾಯ

7
ಜನಸ್ಪಂದನ ಸಭೆಯಲ್ಲಿ ಶಾಂತಿ ಕಾಲೊನಿಯ ನಿವಾಸಿಗಳ ಆಕ್ರೋಶ

ಅನಧಿಕೃತ ಕಟ್ಟಡ ತೆರವಿಗೆ ಒತ್ತಾಯ

Published:
Updated:
Deccan Herald

ರಾಯಚೂರು: ಸಾರ್ವಜನಿಕ ರಸ್ತೆಯಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ತೆರವುಗೊಳಿಸಲು ಮೂರು ತಿಂಗಳಿನಿಂದ ದೂರು ನೀಡುತ್ತಿದ್ದರೂ; ನಗರಸಭೆ ಅಧಿಕಾರಿಗಳು ಕ್ರಮ ಜರುಗಿಸುತ್ತಿಲ್ಲ ಎಂದು ಶಾಂತಿ ಕಾಲೊನಿಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿದ್ದ ಕಾಲೊನಿ ನಿವಾಸಿಗಳು, ರಸ್ತೆಯಲ್ಲಿ ಕಟ್ಟಡ ನಿರ್ಮಾಣ ಮಾಡಿರುವುದರಿಂದ ಬಹಳಷ್ಟು ತೊಂದರೆಯಾಗಿದ್ದು, ಅಧಿಕಾರಿಗಳು ಕ್ರಮ ಜರುಗಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್ ಮಾತನಾಡಿ, ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ನಗರಸಭೆ ಪೌರಾಯುಕ್ತ ರಮೇಶ ನಾಯಕ ಅವರಿಗೆ ಸೂಚಿಸಿದರು.

ಚುನಾವಣೆಯ ಸಮಯದಲ್ಲಿ ಎಪಿಎಂಸಿ ನೌಕರ ರಿಸಿಕಾಂತ ಅವರನ್ನು ಅಮಾನತು ಮಾಡಲಾಗಿದ್ದು, ಅವರ ವೇತನದ ಮೇಲೆ ಕುಟುಂಬ ಅವಲಂಬನೆಯಾಗಿದೆ. ಆದರೆ, ಆರು ತಿಂಗಳಿನಿಂದ ವೇತನ ಬರದ ಪರಿಣಾಮ ಕುಟುಂಬ ನಿರ್ವಹಣೆಗೆ ತೊಂದರೆಯಾಗಿದೆ ಎಂದು ರಿಸಿಕಾಂತ ಪತ್ನಿ ಸುಧಾ ತಿಳಿಸಿದರು.

ಕಳೆದ 17 ವರ್ಷಗಳಿಂದ ಮನೆಯ ಹಕ್ಕುಪತ್ರವನ್ನು ನೀಡದೇ ವಿನಾಕಾರಣ ಅಲೆದಾಡಿಸಲಾಗುತ್ತಿದೆ ಎಂದು ಮಸರಕಲ್ ಗ್ರಾಮದ ಸಲೀಮಾ ಬೀ ಆರೋಪಿಸಿದರು.

ಅಂಗವೈಕಲ್ಯದಿಂದ ಜೀವನ ನಿರ್ವಹಣೆ ಮಾಡುವುದು ಕಷ್ಟವಾಗಿದ್ದು, ಯಾವುದಾರೂ ಉದ್ಯೋಗ ಕಲ್ಪಿಸಬೇಕು ಎಂದು ಸಿಂಧನೂರಿನ ಅಂಗವಿಕಲೆ ಗಂಗಮ್ಮ ಆಗ್ರಹಿಸಿದರು.

ಮಡ್ಡಿಪೇಟೆ, ಮಕ್ತಲಪೇಟೆನಲ್ಲಿ ರಸ್ತೆ ಕಾಮಗಾರಿ ಕೈಗೊಳ್ಳುವಾಗಿ ಕುಡಿಯುವ ನೀರಿನ ಪೈಪುಗಳಿಗೆ ಹಾನಿಯಾಗಿದ್ದು, ಇದರಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿಲ್ಲ. ಬಡಾವಣೆಯ ಜನರಿಗೆ ನೀರಿನ ತೊಂದರೆಯಾಗಿದೆ ಎಂದು ಆರೋಪಿಸಿದರು.

ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್ ಮಾತನಾಡಿ, ಸಂಬಂಧ ಪಟ್ಟ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಜವಾಬ್ದಾರಿ ವಹಿಸಿಕೊಂಡು ಇತ್ಯರ್ಥಗೊಳಿಸಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಅಶೋಕ ಕೊಳ್ಳಾ, ಡಾ.ಸುರೇಂದ್ರ ಬಾಬು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !