ಮಂಗಳವಾರ, ಜನವರಿ 21, 2020
29 °C

ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಬಳ್ಳಾರಿ ಜಿಲ್ಲೆಯ ಶಾಸಕ ಜಿ.ಸೋಮಶೇಖರ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ರಾಯಚೂರಿನ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಕಾನೂನು ಕ್ರಮಕ್ಕೆ ಒತ್ತಾಯಿಸಿ ಜನವರಿ 5 ರಂದು ಬೆಳಿಗ್ಗೆ 10 ಗಂಟೆಗೆ ಡಾ.ಬಿ.ಆರ್‌. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಗತಿಪರ ಸಂಘಟನೆಯ ಮುಖಂಡ ಆರ್.ಮಾನಸಯ್ಯ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ನಗರದಲ್ಲಿ ಸಿಎಎ, ಎನ್‌ಆರ್‌ಸಿ ಪರವಾಗಿ ಬಿಜೆಪಿಯಿಂದ ಆಯೋಜಿಸಿದ್ದ ಬೃಹತ್ ಬಹಿರಂಗ ಸಮಾವೇಶದಲ್ಲಿ ಶಾಸಕ ಸೋಮಶೇಖರ ರೆಡ್ಡಿ ಅವರು ಅವಹೇಳನಕಾರಿ ಭಾಷಣ ಮಾಡಿದ್ದು ಧರ್ಮ ಧರ್ಮಗಳ ಮಧ್ಯೆ ಕಲಹ ಸೃಷ್ಟಿಸುವ ಹೇಳಿಕೆ ನೀಡುತ್ತಿದ್ದಾರೆ. ಸಾರ್ವಜನಿಕರಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಹಿಂದೂ ಪ್ರಜೆಯೂ ಖಡ್ಗ ಹಿಡಿದು ಶಿವಾಜಿಯಂತೆ ಹೋರಾಡಬೇಕಾಗುತ್ತದೆ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿರುವುದು ಸಂವಿಧಾನ ಆಶಯಗಳಗೆ ಧಕ್ಕೆ ತರುತ್ತದೆ ಎಂದು ದೂರಿದರು.

ಪೌರತ್ವ ಕಾಯ್ದೆಯನ್ನು ವಿರೋಧಿಸುತ್ತಿರುವವರು ಮತ್ತು ಮುಸ್ಲಿಂ ಜನಾಂಗದ ವಿರುದ್ಧ ಕೋಮು ಭಾವನೆ ಬಿತ್ತಿ, ಜೀವ ಬೆದರಿಕೆ ಹಾಕಿ, ಭಯದ ವಾತಾವರಣ ಸೃಷ್ಟಿಸಲು ಪ್ರಚೋದನೆ ನೀಡಿರುವುದಕ್ಕೆ ಕೂಡಲೇ ಶಾಸಕರನ್ನು ಪೊಲೀಸರು ಬಂಧಿಸಬೇಕು ಎಂದು ಒತ್ತಾಯಿಸಿದರು.

ಜೆ.ಬಿ.ರಾಜು, ಎಂ.ಆರ್.ಭೇರಿ, ಖಾಜಾ ಅಸ್ಲಂ, ಅನಿಲಕುಮಾರ್, ಕೆ.ನಾಗಲಿಂಗಸ್ವಾಮಿ, ಬಸವರಾಜ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು