ಮಂಗಳವಾರ, ಜುಲೈ 27, 2021
27 °C

ಮುಂಬೈನ ಅಂಬೇಡ್ಕರ್‌ ನಿವಾಸ ಧ್ವಂಸ: ಆರೋಪಿಗಳ ಬಂಧನಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರ: ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ರಾಜಗೃಹ ಧ್ವಂಸ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ರಾಜಗೃಹಕ್ಕೆ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿ ಅಂಬೇಡ್ಕರ್ ಸೇನೆ ಹಾಗೂ ಕರ್ನಾಟಕ ಅಸ್ಪೃಶ್ಯ ಸಮಾಜಗಳ ಮಹಾಸಭಾ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕ್ರಾಂತಿಗೀತೆ ಹಾಡಿ ಘಟನೆ ಖಂಡಿಸಿದರು. ಅನಂತರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ದಾದರ್‌ನಲ್ಲಿರುವ ರಾಜಗೃಹಕ್ಕೆ ಜುಲೈ 7 ರಂದು ಇಬ್ಬರು ದುಷ್ಕರ್ಮಿಗಳು ಮನೆಗೆ ನುಗ್ಗಿ ನಿವಾಸದಲ್ಲಿನ‌ ಸಾಮಾನುಗಳನ್ನು ದ್ವಂಸ ಮಾಡಿದ್ದು ಖಂಡನೀಯ. ಸಂವಿಧಾನ ಶಿಲ್ಪಿ‌ ಡಾ.ಬಿ.ಆರ್ ಅಂಬೇಡ್ಕರ್ ಅವರ ಮನೆಗೆ ಭದ್ರತೆಯಿಲ್ಲದಿದ್ದರೇ ಜನ ಸಾಮಾನ್ಯರಿಗೆ ರಕ್ಷಣೆ ಸಿಗುವುದಾದರೂ ಹೇಗೆ. ಜಾತಿ,ಮತ್ತು ಧರ್ಮ ವಿರೋಧಿಗಳು ಈ ಕೃತ್ಯ ಎಸಗಿದ್ದು ಇದರ ಹಿಂದೆ ದೊಡ್ಡ ಶಡ್ಯಂತ್ರ ಅಡಗಿದೆ ಎಂದು ದೂರಿದರು.

ಈ ಕೂಡಲೇ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಷಡ್ಯಂತ್ರ ರೂಪಿಸಿದ ವ್ಯಕ್ತಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಹಾಸಭಾದ ಸಂಚಾಲಕ ರವೀಂದ್ರ ಪಟ್ಟಿ, ಎಂ.ವಿರುಪಾಕ್ಷಿ, ರಾಜುಪಟ್ಟಿ, ವಿಶ್ವನಾಥ ಪಟ್ಟಿ, ಬಂದೆನವಾಜ್, ಎಂ.ಈರಣ್ಣ ಕುಮಾರಸ್ವಾಮಿ, ಮಹೇಶ ಕುಮಾರ ಮತ್ತಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.