ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಎಲ್‌ಬಿ ಪರೀಕ್ಷೆಗಳನ್ನು ರದ್ದುಪಡಿಸಲು ಒತ್ತಾಯ

Last Updated 21 ಆಗಸ್ಟ್ 2020, 14:18 IST
ಅಕ್ಷರ ಗಾತ್ರ

ರಾಯಚೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯವು (ಕೆಎಸ್‌ಎಲ್‌ಯು) ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವ ತೀರ್ಮಾನ ಕೈಬಿಡಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್ಐ) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಫೆಡರೇಷನ್‌ ರಾಜ್ಯ ಘಟಕದ ಉಪಾಧ್ಯಕ್ಷ ಶಿವಕುಮಾರ ಮ್ಯಾಗಳಮನಿ ಮಾತನಾಡಿ, ಕಾನೂನು ವಿಶ್ವವಿದ್ಯಾಲಯವು ಪ್ರಾರಂಭದಿಂದಲೂ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಾ ಬರುತ್ತಿದೆ. ಕೊರಾನಾ ಸಂಕಷ್ಟದ ಸಮಯದಲ್ಲೂ ತನ್ನ ದಮನಕಾರಿ ನೀತಿಯನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ. ಕೂಡಲೇ ಎಲ್‌ಎಲ್‌ಬಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಿ ಮುಂದಿನ ತರಗತಿಗೆ ಪ್ರಮೊಟ್ ಮಾಡಬೇಕು ಎಂದರು.

ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪಿ ಹೋರಾಟ ಕ್ಕೆ ಮುಂದಾಗುವುದರ ಜೊತೆಗೆ ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ಆನಂತರ ಉಪ ಕುಲಪತಿಗಳಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಕಚೇರಿಯ ಸ್ಥಾನಿಕ ಅಧಿಕಾರಿಗೆ ಸಲ್ಲಿಸಿದರು.

ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್, ಉಪಾಧ್ಯಕ್ಷ ಬಸವರಾಜ ದೀನಸಮುದ್ರ, ಸಹಕಾರ್ಯದರ್ಶಿ ಚಿದಾನಂದ ಕರಿಗೂಳಿ, ಜಿಲ್ಲಾ ಮುಖಂಡರಾದ, ಪ್ರವೀಣ್ ಕುಮಾರ, ಮೌನೇಶ ಬುಳ್ಳಾಪುರ, ಅಮರೇಗೌಡ, ಬಸವಂತ, ಕಾನೂನು ವಿದ್ಯಾರ್ಥಿಗಳಾದ ಶೋಯಬ್,ಮಲ್ಲರೆಡ್ಡಿ, ಗಂಗಾಧರ, ಆಶೀಪ್ ಯಾದಗಿರಿ, ಅಕ್ತರ್, ಆನಂದ ಕಂದಗಲ್, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT