ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯ

Last Updated 30 ಜೂನ್ 2020, 13:29 IST
ಅಕ್ಷರ ಗಾತ್ರ

ರಾಯಚೂರು: ತಾಲ್ಲೂಕಿನ ಆತ್ಕೂರು ವ್ಯಾಪ್ತಿಯಲ್ಲಿರುವ ಪ್ರಸಿದ್ದ ದತ್ತಾತ್ರೇಯ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಮೇಲ್ಸೇತುವೆ ಕಾಮಗಾರಿ ಸುಮಾರು ವರ್ಷಗಳಿಂದ ಅರ್ಧಕ್ಕೆ ನಿಲ್ಲಿಸಲಾಗಿದೆ. ಒಂದು ತಿಂಗಳೊಳಗೆ ಪುನಃ ಕಾರ್ಯಾರಂಭ ಮಾಡಲು ಜಿಲ್ಲಾಡಳಿತ ಕಾಳಜಿ ವಹಿಸದಿದ್ದಲ್ಲಿ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಡಿ.ವೀರೇಶ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾತ್ರಿಗರು ಆತ್ಕೂರಿನಿಂದ ಕೃಷ್ಣ ನದಿ ಮೂಲಕ ತೆಪ್ಪ, ಹರಿಗೋಲಿನಿಂದ ಹೋಗಬೇಕಿದ್ದು ತೀವ್ರ ತೊಂದರೆಯಾಗಿದೆ.ಸಮಸ್ಯೆ ನಿವಾರಣೆಗೆ 2009 ರಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಜಿಲ್ಲಾಡಳಿತ ಲೋಕೋಪಯೋಗಿ ಇಲಾಖೆಗೆ ವಹಿಸಿತ್ತು. ನಂತರ 2012ರಲ್ಲಿ ಹೈದರಾಬಾದ್‌ ಶೇಷಗಿರಿ ರಾವ್ ಗುತ್ತಿಗೆದಾರರಿಗೆ ₹14.25 ಕೋಟಿಗೆ ಟೆಂಡರ್ ಪಡೆದು ಕೇವಲ ಪಿಲ್ಲರ್ ಮಾತ್ರ ನಿರ್ಮಾಣ ಮಾಡಿ ಕಾಮಗಾರಿ ಪೂರ್ಣಗೊಳಿಸದೇ ಅರ್ಧಕ್ಕೆ ಕೈಬಿಟ್ಟಿದ್ದಾರೆ ಎಂದರು.

ಸಂಘದ ಪದಾಧಿಕಾರಿ ಎಚ್. ರಾಜೇಶ, ಮಕ್ಬೂಲ್ ಪಾಶಾ, ಶ್ರೀನಿವಾಸ ಯಾದವ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT