ಶನಿವಾರ, ಜೂನ್ 12, 2021
28 °C

ರಾಯಚೂರು: ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ನನೆಗುದಿಗೆ ಬಿದ್ದಿರುವ ತಾಲ್ಲೂಕಿನ ಕುರವಕುರ್ದಾ ಪುನರ್ವಸತಿ ಗ್ರಾಮದ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ, ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಬುಧವಾರ ಮನವಿ ಸಲ್ಲಿಸಿದರು.

ಕುರುವಕುರ್ದಾ ಜನರು ಮತ್ತು ಜಾನುವಾರುಗಳು ಕೃಷ್ಣಾನದಿ ನಡುಗಡ್ಡೆಯಲ್ಲಿ ವಾಸಿಸುತ್ತಿದ್ದಾರೆ. ನಡುಗಡ್ಡೆಯಿಂದ ಹೊರಬರಲು ಸುಮಾರು ₹ 10ಕೋಟಿ ಅಧಿಕ ಮೊತ್ತದ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಿ ಮಾಡಲಾಗಿತ್ತು. ಆದರೆ, ಈ ಸೇತುವೆ ಕಾಮಗಾರಿ ಅರ್ದಕ್ಕೆ ನಿಂತಿದೆ.

ಈ ಸಂಬಂಧ ಜಿಲ್ಲಾಡಳಿತಕ್ಕೆ ಸಾಕಷ್ಟು ಮನವಿ ಸಲ್ಲಿಸಿದರೂ ಇದುವರೆಗೆ ಸ್ಪಂದನೆಯಿಲ್ಲ. ಈಗಲಾದರೂ ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಸೇತುವೆ ಕಾಮಗಾರಿಯನ್ನು ಆರಂಬಿಸಿ, ಗ್ರಾಮದ ಜನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ವಾಸುದೇವ ಮೇಟಿ ನೇತೃತ್ವ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು