ಬುಧವಾರ, ಮಾರ್ಚ್ 29, 2023
32 °C

ಅಗತ್ಯ ವಸ್ತುಗಳ ಬೆಲೆ ಏರಿಕೆ; ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ದಿನಬಳಕೆ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮೂಲಕ ಪ್ರಧಾನಮಂತ್ರಿಗೆ  ಗುರುವಾರ ಮನವಿ ಸಲ್ಲಿಸಿದರು

ಕೋವಿಡ್ ಲಾಕ್‌ಡೌನ್‌ನಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದು ಇದುವರೆಗೆ ಚೇತರಿಕೆ ಕಂಡಿಲ್ಲ. ಅನೇಕರು ಕೆಲಸ ಕಳೆದುಕೊಂಡು ಜೀವನ ನಿರ್ವಹಣೆಗೆ ಸಾಲ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಜನರಿಗೆ ಆಸರೆಯಾಗಬೇಕಿದ್ದ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ನಿರತರವಾಗಿ ಅಗತ್ಯ ವಸ್ತುಗಳ, ಆಹಾರ ಪದಾರ್ಥಗಳ ಬೆಲೆ ಏರಿಕೆ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಏರಿಕೆ ಮಾಡಿ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಬೆಲೆಏರಿಕೆ ತಡೆಗಟ್ಟಿ ಸಾರ್ವಜನಿಕರಿಗೆ ಪಡಿತರ ವ್ಯವಸ್ಥೆಯ ಮೂಲಕ ತೆರಿಗೆಯೇತರ ಎಲ್ಲಾ ಕುಟುಂಗಳಿಗೆ 35 ಕೆ.ಜಿ. ಆಹಾರ ಧಾನ್ಯ ಮತ್ತು ಅಗತ್ಯ ಬೇಳೆ ಕಾಳುಗಳು, ಸಕ್ಕರೆ, ಅಡುಗೆ ಎಣ್ಣೆಯನ್ನು ವಿತರಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಅವಶ್ಯಕ ವಸ್ತುಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಬೆಲೆ ನಿಯಂತ್ರಣದ ಮೇಲಿದ್ದ ಸರ್ಕಾರ ಪಾತ್ರವನ್ನು ಕಿತ್ತು ಹಾಕಿ ಕಾರ್ಪೋರೇಟ್ ಪರ ನಿಂತಿದೆ. ಕೂಡಲೇ ಬೆಲೆ ಇಳಿಕೆ ಮಾಡಿ ಅಡುಗೆ ಅನಿಲ ಸಬ್ಸಿಡಿ ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾದ್ಯಕ್ಷೆ ಮಹಾಲಕ್ಷ್ಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವರಲಕ್ಷ್ಮಿ, ಖಜಾಂಚಿ ವೆಂಕಟಲಕ್ಷ್ಮಿ , ಸರೋಜ, ಡಿ.ಎಸ್. ಶರಣಬಸವ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.