ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಂಜಾರ ಅಬಿವೃದ್ಧಿ ನಿಗಮ ಮಂಡಳಿಗೆ ಒತ್ತಾಯ

Last Updated 20 ಜನವರಿ 2021, 13:02 IST
ಅಕ್ಷರ ಗಾತ್ರ

ರಾಯಚೂರು: ನಧಾಫ್, ಪಿಂಜಾರ ಅಭಿವೃದ್ಧಿ ನಿಗಮ ಮಂಡಳಿ ರಚನೆ ಮಾಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ನದಾಫ್, ಪಿಂಜಾರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಆನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ 70 ಲಕ್ಷ ದಷ್ಟಿರುವ ಮುಸ್ಲಿಂ ಸಮುದಾಯದ ಪೈಕಿ 35 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿರುವ ಪಿಜಾರ ಸಮುದಾಯ ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಹಾಗೂ ಸಾಮಾಜಿಕವಾಗಿ ಅತ್ಯಂತ ಹಿಂದುಳಿದಿದ್ದಾರೆ. ಕೇಂದ್ರ ಸರ್ಕಾರ ಓಬಿಸಿ ಪಟ್ಟಿಯಲ್ಲಿ ನದಾಫ್, ಪಿಂಜಾರ ಜನಾಂಗವನ್ನು ಸೇರ್ಪಡೆ ಮಾಡಿದ್ದು, ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದಿರುವ ಕಾಯ್ದೆಯಲ್ಲಿ ರಾಜ್ಯದಲ್ಲಿರುವ ನಧಾಫ್, ಪಿಂಜಾರ ಜನಾಂಗವನ್ನು ಅತ್ಯಂತ ಹಿಂದುಳಿದಿರುವ ಬಗ್ಗೆ ಗುರುತಿಸಲಾಗಿದೆ.

ಪಿಂಜಾರ ಜನಾಂಗದ ಪ್ರಮುಖ ಉದ್ಯೋಗ ಗಾದಿ ತಯಾರಿಸುವ, ಗುಡಾರ ನೇಯ್ದೆ, ಹಗ್ಗ ಕಟ್ಟಿಗಳ ತಯಾರಿಕೆಯ ಮೇಲೆ ಅವಲಂಬಿತರಾಗಿ ಅಲೆಮಾರಿ ಜೀವನವನ್ನು ಸಾಗಿಸುತ್ತಿದ್ದಾರೆ. ಇದುವರೆಗೂ ಈ ಜನಾಂಗದಲ್ಲಿ ಒಬ್ಬ ಕೇಂದ್ರ ಆಡಳಿತಾಧಿಕಾರಿ, ಐಪಿಎಸ್ ಅಧಿಕಾರಿಯಾಗಲಿ ಅಥವಾ ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ ನೇರ ಸಹಾಯಕ ಆಯುಕ್ತರಾಗಿ ಆಯ್ಕೆಯಾಗಿಲ್ಲ ಎಂದು ತಿಳಿಸಿದರು.

ಪಿಂಜಾರ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮದ ಬೇಡಿಕೆ ಅನೇಕ ವರ್ಷಗಳಿಂದಲೂ ಇದೆ. ಕಳೆದ ವರ್ಷ ರಾಜ್ಯ ಸರ್ಕಾರ ಭರವಸೆ ನೀಡಿದರೂ ಇದುವರೆಗೂ ಬೇಡಿಕೆ ಈಡೇರಿಸಿಲ್ಲ. ಕೂಡಲೇ ನಧಾಫ್, ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಮೆಹಬುಬ್ ಸಾಬ್ ಸಂತೆಕಲ್ಲೂರು, ಜಿಲ್ಲಾ ಕಾರ್ಯದರ್ಶಿ ಶೇಕ್ಷಾವಲಿ, ಚಾಂದಸಾಬ್, ಇಸ್ಮಾಯಿಲ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT