ಗುರುವಾರ , ಆಗಸ್ಟ್ 18, 2022
25 °C

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕಾಯಂ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಿ ಆಲ್‌ ಇಂಡಿಯಾ ಡೆಮಾಕ್ರಿಟಿಕ್‌ ಯೂಥ್‌ ಆರ್ಗನೈಜೇಷನ್‌ (ಎಐಡಿವೈಒ) ಜಿಲ್ಲಾ ಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಡಾ.ಬಿ.ಆರ್‌,ಅಂಬೇಡ್ಕರ್‌ ವೃತ್ತದಿಂದ ಟಿಪ್ಪು ಸುಸ್ತಾನ ಉದ್ಯಾನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಆನಂತರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ರಾಯಚೂರು ವಿಶ್ವವಿದ್ಯಾಲಯಕ್ಕೆ ಮೂಲಸೌಕರ್ಯ ಕಲ್ಪಿಸಬೇಕು. ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಕೂಡಲೇ ನೇಮಕ ಮಾಡಬೇಕು. ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿಯೂ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಕೂಡಲೇ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಿದರು.

ರಾಯಚೂರು ನಗರದಲ್ಲಿ ಶುದ್ಧನೀರು ಪೂರೈಸಬೇಕು. ನಗರಸಭೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಬೇಕು. ಬೊಳಮಾನದೊಡ್ಡಿ ಮತ್ತು ವಾಸವಿನಗರ ಮಧ್ಯೆ ನಿರಂತರ ಬಸ್‌ ಸಂಚಾರದ ವ್ಯವಸ್ಥೆ ಕಲ್ಪಿಸಬೇಕು. ಆರ್‌ಟಿಪಿಎಸ್‌, ವೈಟಿಪಿಎಸ್‌, ಹಟ್ಟಿಚಿನ್ನದ ಗಣಿಯಲ್ಲಿ ಕಳೆದ 15 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರನ್ನು ಆದ್ಯತೆಯಿಂದ ನೇಮಕ ಮಾಡಿಕೊಳ್ಳಬೇಕು ಎಂದು ಕೋರಿದರು.

ಸಂಘದ ರಾಜ್ಯ ಉಪಾಧ್ಯಕ್ಷ ಶರಣಪ್ಪ ಉದ್ಭಾಳ, ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವ ಜಾನೇಕಲ್‌, ವಿನೋದ, ಕೃಷ್ಣಾ, ಅಭಿಲಾಷ, ಜಾಫರ್‌, ಮಲ್ಲಿಕಾರ್ಜುನ ಮತ್ತಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು