ಬುಧವಾರ, ಏಪ್ರಿಲ್ 1, 2020
19 °C

ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕಲ್ಯಾಣ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲಾ, ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಜಿಲ್ಲಾಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್ ವೃತ್ತದಿಂದ ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯರ ನೇತೃತ್ವದಲ್ಲಿ ಆರಂಭವಾದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಪ್ರತಿಭಟಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಅನುದಾನಿತ ಶಾಲಾ ಕಾಲೇಜುಗಳ ಮಕ್ಕಳಿಗೆ ನೀಡುವ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಅನುದಾನ ರಹಿತ ಶಾಲಾ ಕಾಲೇಜು ಮಕ್ಕಳಿಗೂ ನೀಡಬೇಕು. 1995 ರಿಂದ ಪ್ರಾರಂಭವಾದ ಎಲ್ಲಾ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಹಾಗೂ ಉಪನ್ಯಾಸಕ ವೃಂದಕ್ಕೆ ವೇತನ ಅನುದಾನ ನೀಡಬೇಕು. ಆರ್ ಟಿ ಇ ದಾಖಲಾತಿಯನ್ನು ಮೊದಲಿನಂತೆ ಮುಂದುವರೆಸುವುದು. ಆರ್ಥಿಕವಾಗಿ ಹಿಂದುಳಿದ ಪಾಲಕರ ಮಕ್ಕಳಿಗೆ ಸಾಮಾಜಿಕ ನ್ಯಾಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದರು.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನೀಡುತ್ತಿರುವ ಗೌರವಧನವನ್ನು ₹6,500 ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ₹12,500 ರಂತೆ ಅನುದಾನ ರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಪಾವತಿಸಬೇಕು. ಕಲ್ಯಾಣ ಕರ್ನಾಟಕ ಅನುದಾನ ಅಡಿಯಲ್ಲಿ ಖಾಸಗಿ ಶಾಲೆಗಳ ಮೂಲ ಸೌಕರ್ಯ ಒದಗಿಸಲು ಧನಸಹಾಯ ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿ ಒಕ್ಕೂಟದ ಸಂಚಾಲಕ ರಾಜಾ ಶ್ರೀನಿವಾಸ, ಎನ್.ಎಚ್.ಮುಕ್ಕಣ್ಣ, ಎಸ್.ಎಲ್.ಕೇಶವರೆಡ್ಡಿ, ಮಹಾಂತೇಶ, ಜಂಗಲ್ಲಪ್ಪಗೌಡ, ಬಿ.ಎ.ಕರೀಂಸಾಬ, ಶಂಕರಲಿಂಗಯ್ಯ ಸ್ವಾಮಿ, ನರಸಪ್ಪ ಪಂಚಮುಖಿ, ಮಂಜುನಾಥ, ಪಿ.ಜಿ.ಪವಾರ್, ಶಂಕರಗೌಡ, ಯಮನಪ್ಪ, ನರಸಪ್ಪ ಯಾದವ, ಆಯಯ್ಯ, ನದಾಫ್ ಸೇರಿದಂತೆ ಸಿಬ್ಬಂದಿ ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು