ಶುಕ್ರವಾರ, ಡಿಸೆಂಬರ್ 4, 2020
21 °C

ಅಲೆಮಾರಿ ಅಭಿವೃದ್ಧಿಗೆ ಸದಸ್ಯತ್ವ ನೀಡಿ: ಹೊಲಯದಾಸರ ಸಮಾಜ ಸೇವಾ ಸಂಘ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಪರಿಶಿಷ್ಟ ಜಾತಿ, ಅಲೆಮಾರಿ, ಮಾಲದಾಸರಿ, ಚನ್ನದಾಸರು, ಹೊಲೆಯದಾಸರು, ಸಮುದಾಯಗಳ ಅಭ್ಯರ್ಥಿಗಳನ್ನು ಅಲೆಮಾರಿ ಅಭಿವೃದ್ಧಿ ಅನುಷ್ಠಾನ ಸಮಿತಿಗೆ ನಾಮ ನಿರ್ದೇಶಿತ ಸದಸ್ಯತ್ವ ಆಯ್ಕೆಯಲ್ಲಿ ಆದ ಅನ್ಯಾಯವನ್ನು ಸರಿಪಡಿಸುವಂತೆ ತಾಲ್ಲೂಕು ಚೆನ್ನದಾಸರ ಮಾಲದಾಸರಿ, ಹೊಲಯದಾಸರ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಅನಾದಿಕಾಲದಿಂದ ಅಸ್ಪೃಶ್ಯಕ್ಕೆ ಒಳಗಾಗಿ, ಬಿಕ್ಷೆ ಬೇಡಿ ಜೀವನ ನಡೆಸುವ ಅಲೆಮಾರಿ ಜನಾಂಗದವರು ರಾಜಕೀಯ, ಆರ್ಥಿಕ, ಸಾಮಾಜಿಕ ಹಿಂದುಳಿದಿದ್ದಾರೆ. ಜಿಲ್ಲೆಯಲ್ಲಿ ಈ ಜನಾಂಗದವರು ಬಹುಸಂಖ್ಯತರಾಗಿದ್ದರೂ ಕೂಡ ಜಿಲ್ಲಾ ಮಟ್ಟದ ಅಲೆಮಾರಿ ಅಭಿವೃದ್ಧಿ ಅನುಷ್ಠಾನದ ನಾಮ ನಿರ್ದೇಶಿತ ಸದಸ್ಯತ್ವದಲ್ಲಿ ಪರಿಶಿಷ್ಟ ಜಾತಿ ಅಲೆಮಾರಿ, ಮಾಲದಾಸರಿ, ಚನ್ನದಾಸರು, ಹೊಲೆಯದಾಸರ, ಸಮುದಾಯದ ಅಭ್ಯರ್ಥಿಗಳನ್ನು ಆಯ್ಕೆಯಲ್ಲಿ ಕಡೆಗಣಿಸಿ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ದೂರಿದರು.

ಪರಿಶಿಷ್ಟ ಜಾತಿಯ ಅಲೆಮಾರಿ, ಮಾಲದಾಸರಿ, ಚನ್ನದಾಸರು, ಹೊಲೆಯ ದಾಸರು ಸಮುದಾಯದ ಅಭ್ಯರ್ಥಿಗಳನ್ನು ಅಲೆಮಾರಿ ಅಭಿವೃದ್ಧಿ ಅನುಷ್ಟಾನ ಸಮಿತಿಗೆ ನಾಮ ನಿರ್ದೇಶನ ಸದಸ್ಯತ್ವಕ್ಕೆ ಕನಿಷ್ಟ ಒಬ್ಬರನ್ನು ಆಯ್ಕೆ ಮಾಡಿ ಸದಸ್ಯತ್ವ ನೀಡಬೇಕು. ಇನ್ನೊಬ್ಬ ಸದಸ್ಯನನ್ನು ವಿಶೇಷ ಆಹ್ವಾನಿತರಾಗಿ ಆಯ್ಕೆ ಮಾಡಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷ ವೆಂಕಟೇಶ, ಕಾರ್ಯದರ್ಶಿ ಬಿ.ರಂಗಮುನಿದಾಸ, ಗುರುನಂದನ, ಗೋಪಾಲ, ನರಸಿಂಹ, ನಾಗೇಶ, ದೇವಪ್ಪ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.