ಶನಿವಾರ, ಅಕ್ಟೋಬರ್ 23, 2021
21 °C

ರಾಯಚೂರು: ಡೆಂಗಿ, ಮಲೇರಿಯಾ ರೋಗಗಳನ್ನು ತಡೆಗಟ್ಟಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಹೆಚ್ಚಾಗುತ್ತಿರುವ ಡೆಂಗಿ, ಮಲೇರಿಯಾ ಹಾಗೂ ಚಿಕನ್ ಗುನ್ಯ ರೋಗಗಳನ್ನು ತಡೆಗಟ್ಟಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಈಗಾಗಲೇ ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಡೆಂಗಿ ಪ್ರಕರಣ ಹೆಚ್ಚಾಗುತ್ತಿವೆ. ಈಗಾಗಲೇ ಮಾನ್ವಿ ಹಾಗೂ ಸಿಂಧನೂರಿನಲ್ಲಿ ಡೆಂಗಿ ಜ್ವರಕ್ಕೆ ಮಕ್ಕಳಿಬ್ಬರು ಬಲಿಯಾಗಿದ್ದಾರೆ. ತಾಲ್ಲೂಕು ವೈದ್ಯಾಧಿಕಾರಿಗಳು ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.

ಕೂಡಲೇ ಜಿಲ್ಲಾಡಳಿತ ಸಂಬಂಧಿಸಿದ ಗ್ರಾಮ ಪಂಚಾಯಿತಿ, ಪುರಸಭೆ, ತಾಲ್ಲೂಕಾಡಳಿತ, ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಡೆಂಗಿ, ಮಲೇರಿಯಾ, ಚಿಕನ್ ಗುನ್ಯ ರೋಗ ಹರಡದಂತೆ ಅಗತ್ಯ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.

ಮಾನ್ವಿ ತಹಶೀಲ್ದಾರ್ ಸಂತೋಷಿ ರಾಣಿ ಅವರು ಮೇಲೆ ಭ್ರಷ್ಟಾಚಾರದ ಆರೋಪವಿದ್ದು, ಕೂಡಲೇ ಅವರನ್ನು ಅಮಾನತುಗೊಳಿಸಬೇಕು. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಕೆ.ಶಿವಕುಮಾರ ನಾಯಕ ವಕೀಲ, ತಾಲ್ಲೂಕು ಅಧ್ಯಕ್ಷ ಮೌನೇಶ ನಾಯಕ ಮ್ಯಾಕಲ್, ಮಹಿಳಾ ಘಟಕ ಅಧ್ಯಕ್ಷ ಲಕ್ಷ್ಮೀದೇವಿ, ಪದಾಧಿಕಾರಿಗಳಾದ ಚಿದಾನಂದಸ್ವಾಮಿ ಗೋವಿನದೊಡ್ಡಿ, ಈರೇಶ ನಾಯಕ, ದಾನಪ್ಪ, ಹನುಮೇಶ ನಾಯಕ, ಹುಲಿಗೆಪ್ಪ ನಾಯಕ, ಜಿ.ನರಸಿಂಹ ನಾಯಕ, ಶಿವನಪ್ಪ ನಾಯಕ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು