ಶುಕ್ರವಾರ, ಸೆಪ್ಟೆಂಬರ್ 18, 2020
28 °C

ರಾಯಚೂರು: ಕಾರ್ಮಿಕ ವಿರೋಧಿ ನೀತಿ ಕೈಬಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಕೆಪಿಟಿಸಿಎಲ್‌ನಿಂದ ಜೂನ್‌ 9 ರಂದು ಹೊರಡಿಸಿರುವ ಗುತ್ತಿಗೆ ನಿಯಮಾವಳಿಗಳಲ್ಲಿ ಕಾರ್ಮಿಕ ವಿರೋಧಿ ಅಂಶಗಳನ್ನು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಶನ್, ಅಖಿಲ ಭಾರತ ವಿದ್ಯುತ್ ನೌಕರರ ಒಕ್ಕೂಟ( ಸಿಐಟಿಯು ಸಂಯೋಜಿತ) ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಜ್ಯದ 20 ಸಾವಿರ ಗುತ್ತಿಗೆ ಕಾರ್ಮಿಕರು ವಿವಿಧ ಸ್ತರದ ಸ್ಟೇಶನ್ ಅಪರೇಟರ್, ಸಹಾಯಕರು ಸಿಬ್ಬಂದಿ ದುಡಿಯುತ್ತಿದ್ದಾರೆ. ಅವರನ್ನು ಕೆಲಸಕ್ಕೆ ತೆಗೆದುಕೊಳ್ಳವಾಗ ಶೈಕ್ಷಣಿಕ ಅರ್ಹತೆ ಕಡ್ಡಾಯಗೊಳಿಸದೆ ದುಡಿಸಿಕೊಳ್ಳಲಾಗಿದೆ. ಆದರೆ ಈಗ ನಿರ್ಬಂಧ ಸಡಿಲಿಕೆಯ ನಂತರ ಕಾರ್ಮಿಕರನ್ನು ತೆಗೆಯಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ನೇರವಾಗಿ ಯಾರನ್ನು ಕೆಲಸದಿಂದ ತೆಗೆಯಬಾರದು ಎಂದು ಹೇಳಿದ್ದರು. ಇಂದಿನ ಇಲಾಖೆಯ ಪ್ರಕರಣ ಒಂದರಲ್ಲಿ ನ್ಯಾಯಾಲಯದಲ್ಲಿ ವಿವಾದ ಬಾಕಿ ಇರುವುದರಿಂದ ಯಾವುದೇ ಕಾರ್ಮಿಕರ ಸೇವಾ ಷರತ್ತು ಬದಲಾಯಿಸುವುದು ಕಾನೂನು ಬಾಹೀರ. ಕಾರ್ಮಿಕ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ದೂರಿದರು.

ಸಂಘದ ಜಿಲ್ಲಾಧ್ಯಕ್ಷ ಅಮರೇಶ ಮಾವಿನಬಾವಿ, ಡಿ.ಎಸ್. ಶರಣಬಸವ, ಮಂಜುನಾಥ ಅರಕೇರಾ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು