ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಪ್ರಮಾಣ ಹೆಚ್ಚಿಸಲು ಮನವಿ

Last Updated 21 ಅಕ್ಟೋಬರ್ 2020, 14:37 IST
ಅಕ್ಷರ ಗಾತ್ರ

ರಾಯಚೂರು: ಪರಿಶಿಷ್ಟ ಪಂಗಡದವರಿಗೆ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿ ಪ್ರಮಾಣವನ್ನು ಶೇ 3 ರಿಂದ 7.5ಕ್ಕೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಮಹಿಳಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಆನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ರಾಜ್ಯದಲ್ಲಿ ಪರಿಶಿಷ್ಟ ಪಂಗಡದವರಿಗೆ 1978ರಿಂದ ಕೇವಲ ಶೇ 3 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಆದರೆ, 42 ವರ್ಷಗಳಿಂದ ಈ ಸಮುದಾಯದ ಯುವಕರು-ಯುವತಿಯರು ನಿರುದ್ಯೋಗಿಗಳಾಗಿದ್ದಾರೆ. ಸೌಲಭ್ಯಗಳಿಂದಲೂ ವಂಚಿತರಾಗಿದ್ದಾರೆ.

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ಪ್ರಸನ್ನಾನಂದ ಸ್ವಾಮೀಜಿಯವರ ಹೋರಾಟದ ಫಲವಾಗಿ ಸರ್ಕಾರ ನ್ಯಾಯಮೂರ್ತಿ ನಾಗಮೋಹನ ದಾಸ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚನೆ ಮಾಡಿತು. ಆಯೋಗವು ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ವರದಿಯಂತೆ ಮೀಸಲಾತಿ ಹೆಚ್ಚಳ ಮಾಡಿ ಸಮುದಾಯದ ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಸಹಕರಿಸಬೇಕು ಎಂದು ಒತ್ತಾಯಿಸಿದರು. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಡಾ.ಶಾರದಾ ಪಿ.ಹುಲಿನಾಯಕ , ಕರಿಯಪ್ಪ ನಾಯಕ, ಅಭಿಮನ್ಯು ನಾಯಕ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT