ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ತನಿಖೆಗೆ ಆಗ್ರಹಿಸಿ ದಸಂಸ ಧರಣಿ 18 ರಂದು

Last Updated 8 ನವೆಂಬರ್ 2019, 14:03 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕ ವೈ.ಎ ಕಾಳೆ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿದದಲಿತ ಸಂಘರ್ಷ ಸಮಿತಿ ಮುಖಂಡ ಈರಣ್ಣ ಭಂಡಾರಿ,ಜಿಲ್ಲೆಯಿಂದ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ನವೆಂಬರ್‌ 18 ರಂದು ಧರಣಿ ನಡೆಸಲಾಗುವುದು ಎಂದು ಹೇಳಿದರು.

ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಪ್ರವಾಸೋದ್ಯಮ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿದ ಕಾಳೆ ಅವರು ವಿವಿಧ ಯೋಜನೆಗಳಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಅವ್ಯವಹಾರ ಎಸಗಿದ್ದಾರೆ ಎಂದು ಆರೋಪಿಸಿದರು.

ಅವರನ್ನು ಸರ್ಕಾರವು ಸಂಪೂರ್ಣ ತನಿಖೆಗೆ ಒಳಪಡಿಸಿ ವರ್ಗಾವಣೆ ಮಾಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. 18ರಂದು ಡಾ.ಬಿ.ಆರ್.‌ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮಯೂರ್ ನಸ್ಲಾಪುರ, ಬಸವರಾಜ್ ನಕ್ಕುಂದಿ, ಎಲ್.ವಿ.ಸುರೇಶ್, ಅಜಿತ್ ಕುಮಾರ ಹೊನ್ನಟಗಿ, ಪರಶುರಾಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT