ಬುಧವಾರ, ಸೆಪ್ಟೆಂಬರ್ 23, 2020
26 °C

 ಬ್ಯಾಂಕ್ ಸಿಬ್ಬಂದಿ ಸಾವು: ತನಿಖೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ನಗರದ ಆಶಾಪುರ ರಸ್ತೆಯ ಅಮರೇಶ್ವರ ನಗರದ ಬಾಡಿಗೆ ಮನೆಯಲ್ಲಿ ತಾಲ್ಲೂಕಿನ ತುಂಗಭಧ್ರಾ ಕ್ಯಾಂಪ್ ಗ್ರಾಮದ ಇಂದಿರಾ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಿದರು.

ನಗರದ ಎಸ್‌ಬಿಐ ಮುಖ್ಯ ಶಾಖೆಯ ನೌಕರರಾಗಿದ್ದ ಇಂದಿರಾ ಅವರೊಂದಿಗೆ ಅದೇ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಅನೈತಿಕ ಸಂಬಂಧ ಬೆಳೆಸಿದ್ದ. ಗರ್ಭಿಣಿಯಾಗಿದ್ದ ಇಂದಿರಾಳನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿದರು.

ಇಂದಿರಾ ವಾಸವಿದ್ದ ಮನೆಯ ಸಿಸಿಟಿವಿ ಫುಟೇಜ್, ದೂರವಾಣಿ ಸಂಭಾಷಣೆ, ವೈದ್ಯಕೀಯ ದಾಖಲೆ ಪರಿಶೀಲಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಸಂಘದ ಅಧ್ಯಕ್ಷ ಯಲ್ಲಪ್ಪ ಜಾಲಿಬೆಂಚಿ, ಕಾರ್ಯದರ್ಶಿ ತಿಮ್ಮಪ್ಪ ನಾಯಕ, ಶಿವರಾಜ ಮೇಟಿಗೌಡ, ಗಿರಿಯಪ್ಪ ದಿನ್ನಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.