ಸೋಮವಾರ, ಜೂಲೈ 13, 2020
28 °C

ರಾಯಚೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಲು ಒತ್ತಾಯ

ಪ್ರಜಾವಾನಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ರೈತ ವಿರೋಧಿ ಎಪಿಎಂಸಿ 2017ರ ಕಾಯ್ದೆಗೆ ತಿದ್ದುಪಡಿ ತರಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಕಾರಿಗಳಿಂದ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ರೈತ ದೇಶದ ಬೆನ್ನೆಲುಬು, ರೈತರ ಹಿತ ಕಾಪಾಡುವುದೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮುಖ್ಯ ಕೆಲಸ. ಕೃಷಿ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ದೊರೆಯಬೇಕು. ಸರಿಯಾದ ತೂಕ ಮಾಡಿ ಮಧ್ಯವರ್ತಿಗಳ ಹಾವಳಿ ಇರಬಾರದು ಎಂಬ ಉದ್ದೇಶದಿಂದ ಎಪಿಎಂಸಿ ಮಾರುಕಟ್ಟೆ ಒದಗಿಸಲಾಗಿದೆ. ಅದಕ್ಕೆ ಸೂಕ್ತ ತಿದ್ದುಪಡಿ ತಂದು ರೈತರಿಗೆ ಸಕಲ ಅನುಕೂಲ ಒದಗಿಸಲು 2017ರ ಕಾಯ್ದೆ ಜಾರಿ ಮಾಡಲಾಗಿದೆ. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಮತ್ತು ಎಂಎನ್ಸಿ ಗಳಿಗೆ ಮಣೆ ಹಾಕಲು ಈ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿದ್ದು ಖಂಡನೀಯ ಎಂದು ತಿಳಿಸಲಾಗಿದೆ.

ಸಂಘದ ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ, ಉಮಾದೇವಿ ನಾಯಕ್, ರಾಮಯ್ಯ ಜವಳಗೇರಾ, ಸಿ.ಎಚ್ ರವಿ, ತಿಮ್ಮಪ್ಪ ಭೋವಿ, ಕೆ.ವೈ ಬಸವರಾಜ್ ನಾಯಕ್, ಶಿವರಾಜ್ ಮರಲ್ದಿನ್ನಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು