ಭಾನುವಾರ, ಡಿಸೆಂಬರ್ 8, 2019
25 °C

ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಹೈದರಾಬಾದ್‌ನಲ್ಲಿ ಸಾಮೂಹಿಕ ಅತ್ಯಾಚಾರ, ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ, ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿ ಕಚೇರಿಯ ಸ್ಥಾನಿಕ ಅಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಹೈದ್ರಾಬಾದ್ ಮೂಲದ ಪಶುವೈದ್ಯೆ ಪ್ರಿಯಾಂಕರೆಡ್ಡಿ ಅವರನ್ನು ನಾಲ್ಕು ಜನ ಸೇರಿ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ. ಇಂತಹ ಪ್ರಕರಣಗಳು ದಿನನಿತ್ಯ ಹೆಚ್ಚುತ್ತಿದ್ದು, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ನಿತ್ಯ ಹೊರಗಡೆ ಕೆಲಸಕ್ಕೆ ತೆರಳುವ ಮಹಿಳೆಯರು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಇಂತಹ ಪ್ರಕರಣಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಇಮ್ರಾನ್ ಬಡೆಸಾಬ್, ಆಲಂ ಗಬ್ಭೂರು, ಅಲ್ತಾಫ್, ಸೈಯದ್, ಗೌತಮ್, ನಾಗೇಶ್, ರಾಮು, ಫಾರುಕ್ ಪಟೇಲ, ಸುಷ್ಮಾ ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರತಿಕ್ರಿಯಿಸಿ (+)