ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಪ್ರಿಲ್ ವೇತನ ಬಿಡುಗಡೆಗೆ ಆಗ್ರಹ

Last Updated 20 ಮೇ 2021, 12:52 IST
ಅಕ್ಷರ ಗಾತ್ರ

ರಾಯಚೂರು: ಅಂಗನವಾಡಿ ಕಾರ್ಯಕತೆಯರಿಗೆ ಕೋವಿಡ್ ರಕ್ಷಣೆ ಉಪಕರಣಗಳನ್ನು ಒದಗಿಸಬೇಕು. ಏಪ್ರಿಲ್ ವೇತನ ಹಾಗೂ ಅಂಗನವಾಡಿ ಕೇಂದ್ರಗಳ ಬಾಡಿಗೆ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಗುರುವಾರ ಮನವಿ ಸಲ್ಲಿಸಿದರು.

ಕೋವಿಡ್ ತೀವ್ರವಾಗಿ ಹರಡುತ್ತಿರುವ ಮಧ್ಯೆ ನೌಕರರು ಮನೆ ಮನೆಗೆ ಹೋಗಿ ಪೌಷ್ಟಿಕ ಆಹಾರ ನೀಡುತ್ತಿದ್ದಾರೆ. ಆದರೆ ಅವರ ಮುಂಜಾಗ್ರತೆಗೆ ಸ್ಯಾನಿಟೈಜರ್, ಮಾಸ್ಕ್, ಗ್ಲೌಸ್ ನೀಡಿಲ್ಲ. ಇದರ ಖರ್ಚನ್ನು ಕಾರ್ಯಕರ್ತೆಯರ ಮೇಲೆ ಹಾಕಿರುವುದು ಸರಿಯಲ್ಲ. ಕೂಡಲೇ ಎಲ್ಲಾ ಉಪಕರಣಗಳನ್ನು ಒದಗಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚಿಸಲಾದ ಕೋವಿಡ್ ಜಾಗೃತಿ ಸಮಿತಿಗಳಲ್ಲಿ ಪಿಡಿಓ, ಆಶಾ, ಅಂಗನವಾಡಿ ಕಾರ್ಯಕತೆಯರು, ಶಾಲಾ ಶಿಕ್ಷಕರು ಮತ್ತು ಎಎನ್ಎಂ ನರ್ಸ್‌ಗಳು ಇದ್ದಾರೆ. ಆದರೆ ತಳಮಟ್ಟದಲ್ಲಿ ಜನರ ಬಳಿ ತೆರಳಲು ಯಾರೂ ಹೋಗುವುದಿಲ್ಲ. ಅಂಗನವಾಡಿ ಕಾರ್ಯಕರ್ತೆಯರಿಗೆ ಒತ್ತಡ ಹೇರಿ ಕೆಲಸ ಮಾಡಿಸಲಾಗುತ್ತಿದೆ ಎಂದು ದೂರಿದರು.

ಕೂಡಲೇ ವೇತನ ಹಾಗೂ ಕೇಂದ್ರಗಳ ಬಾಡಿಗೆ ಹಣ ಬಿಡುಗಡೆ ಮಾಡಿಸಬೇಕು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಗೋಕರಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT