ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ‘ಬಾಕಿ ವೇತನ ಪಾವತಿಸಿ'

Last Updated 13 ಆಗಸ್ಟ್ 2020, 16:11 IST
ಅಕ್ಷರ ಗಾತ್ರ

ರಾಯಚೂರು: ಬಿಸಿಯೂಟ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಾಸಿಕ ₹7,500 ದಂತೆ 6 ತಿಂಗಳು ನೀಡಬೇಕು. ಎಲ್ಐಸಿ ಆಧಾರಿತ ಪೆನ್ಷನ್ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘ (ಸಿಐಟಿಯು) ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಶಾಸಕ ದದ್ದಲ್ ಬಸನಗೌಡ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಮದ್ಯಹ್ನದ ಬಿಸಿಯೂಟ ಯೋಜನೆಯಡಿ ಕಡು ಬಡ ಮಹಿಳೆಯರು, ವಿಚ್ಛೇದಿತರು, ವಿದವೆಯರು ಸೇರಿ 1,17,999 ನೌಕರರು ಕಾರ್ಯ ನಿರ್ವಸುತ್ತಿದ್ದಾರೆ. ಇವರು ಉದ್ಯೋಗವನ್ನೆ ನಂಬಿಕೊಂಡು ಜೀವನ ನಡೆಸುತ್ತದ್ದಾರೆ. ಇವರಿಗೆನಾಲ್ಕು ತಿಂಗಳಿಂದ ಯಾವುದೇ ಆದಾಯವಿಲ್ಲ ಲಾಕ್‌ಡೌನ್ ನಿಂದ ತತ್ತರಿಸಿದ ಇವರಿಗೆ ಜಿವನ ನಡೆಸಲು ಆರ್ಥಿಕ ಸಂಕಷ್ಟ ಎದುರಾಗಿದೆ. ಇಂತಹ ಸಮಯದಲ್ಲಿ ಸರ್ಕಾರ ಇವರ ಬೇಡಿಕೆಗಳಿಗೆ ಸ್ಪಂದಿಸದೇ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದರು.

ಸಂಘದ ಗೌರವಾಧ್ಯಕ್ಷ ಡಿ.ಎಸ್ ಶರಣಬಸವ, ಅಧ್ಯಕ್ಷೆ ನಾಗಮ್ಮ, ಅಕ್ಕ ಮಹಾದೇವಿ, ಕಲ್ಯಾಣಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT