ಮಂಗಳವಾರ, 28 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಷ್ಯವೇತನ ಆರಂಭಿಸುವಂತೆ ಒತ್ತಾಯ

Last Updated 11 ಫೆಬ್ರವರಿ 2023, 14:31 IST
ಅಕ್ಷರ ಗಾತ್ರ

ರಾಯಚೂರು: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ರದ್ದುಪಡಿಸಿರುವ ಕೇಂದ್ರ ಸರ್ಕಾರದ ಯೋಜನೆಯನ್ನು ರಾಜ್ಯ ಸರ್ಕಾರ ಮುಂದುವರೆಸಬೇಕು ಎಂದು ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ (ಎಸ್‌ಐಒ) ಜಿಲ್ಲಾ ಘಟಕದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.

ಅಲ್ಪಸಂಖ್ಯಾತರ ಮತ್ತು ಬುಡಕಟ್ಟು ವ್ಯವಹಾರಗಳ ಹಾಗೂ ಸಾಮಾಜಿಕ ನ್ಯಾಯ, ಸಬಲೀಕರಣ ಸಚಿವಾಲಯದಿಂದ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆಯಡಿ ಬರುವ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವೇತನ ನೀಡಲಾಗುತ್ತಿತ್ತು. 2022-23ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಮೆಟ್ರಿಕ್‍ ಪೂರ್ವ ವಿದ್ಯಾರ್ಥಿ ವೇತನ ರದ್ದುಪಡಿಸಿದ್ದು ಖಂಡನೀಯ ಎಂದರು.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಈ ಬಾರಿ ಸಲ್ಲಿಕೆಯಾದ ಅರ್ಜಿಗಳ ಪೈಕಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳನ್ನು ಮಾತ್ರ ಶಿಷ್ಯವೇತನಕ್ಕೆ ಪರಿಗಣಿಸಲಾಗುವುದು ಹಾಗೂ ರಜ್ಯ ಮತ್ತು ಜಿಲ್ಲಾ ಮತ್ತು ಶಿಕ್ಷಣ ಸಂಸ್ಥೆಯ ನೋಡಲ್ ಅಧಿಕಾರಿಗಳು ಪರಿಶೀಲನಾ ಹಂತದಲ್ಲಿ ಕೇವಲ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಅರ್ಜಿಯನ್ನು ಮಾತ್ರ ಪರಿಶೀಲನೆ ಮಾಡಲು ನಿರ್ದೇಶನ ನೀಡಿರುವ ಕ್ರಮ ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಕೂಡಲೇ ಸಕಾರಾತ್ಮಕ ನಿರ್ಧಾರ ತೆಗೆದುಕೊಂಡು ವಿದ್ಯಾರ್ಥಿಗಳ ಶಿಕ್ಷಣಿಕ ಹಕ್ಕಾದ ವಿದ್ಯಾರ್ಥಿ ವೇತನವನ್ನು ನೀಡಲು ಅನುದಾನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಜೀಶಾನ್ ಅಖಿಲ್ ಸಿದ್ಧಕಿ, ಜಿಲ್ಲಾಧ್ಯಕ್ಷ ಅಬ್ದುಲ್ ಹನ್ನಾನ, ಪದಾಧಿಕಾರಿ ಪೀರ್ ಲತಗೇರಿ, ನಾಸೀರ್, ನೂರ್ ಮಹಮ್ಮದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT